ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗವಾಗಿದ್ದು, ಚೀನಾ ಆಕ್ಷೇಪ ವ್ಯಕ್ತಪಡಿಸುವುದಕ್ಕೆ ಮುಂಚಿತವಾಗಿ ಮೂಲ ದಾಖಲೆಗಳನ್ನು ಪರಿಶೀಲಿಸಬೇಕು ಎಂದು ವಿದೇಶಾಂಗ ಇಲಾಖೆ ಕಾರ್ಯದರ್ಶಿ ನಿರುಪಮಾ ರಾವ್ ಕಿಡಿಕಾರಿದ್ದಾರೆ.
ಟಿಬೆಟ್ ಧರ್ಮಗುರು ದಲೈಲಾಮಾ ಅರುಣಾಚಲ ಪ್ರದೇಶಕ್ಕೆ ನೀಡಿದ ಭೇಟಿ ಕುರಿತು ಚೀನಾ ವ್ಯಕ್ತಪಡಿಸಿದ ಆಕ್ಷೇಪಕ್ಕೆ ಪ್ರತಿಕ್ರಿಯಿಸಿದ ಅವರು ಅದು ಚೀನಾ ಸರ್ಕಾರಕ್ಕೆ ಸಂಬಂಧಿಸಿದ ವಿಚಾರವಲ್ಲವೆಂದು ಮಾರ್ಮಿಕವಾಗಿ ಹೇಳಿದ್ದಾರೆ.
ಅರುಣಾಚಲ ಪ್ರದೇಶದ ವಿಷಯದಲ್ಲಿ ಭಾರತದ ನಿರ್ಧಾರ ದೃಢ. ಆದರೂ ಚೀನಾ ಅರುಣಾಚಲ ಪ್ರದೇಶದ ಬಗ್ಗೆ ವಿನಾಕರಣ ಸಮಸ್ಯೆ ಹುಟ್ಟಿಸುತ್ತಿರುವುದು ಸರಿಯಲ್ಲ ಎಂದು ನಿರುಪಮಾ ರಾವ್ ಹೇಳಿದರು.
ಇತ್ತೀಚೆಗೆ ವಿಧಾನಸಭೆ ಚುನಾವಣೆ ಪ್ರಚಾರದ ಸಲುವಾಗಿ ಪ್ರಧಾನಿ ಮನಮೋಹನ್ ಸಿಂಗ್ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿತ್ತು. ವಿವಾದಿತ ಪ್ರದೇಶವಾದ್ದರಿಂದ ಸಿಂಗ್ ಬಂದಿದ್ದು ಸರಿಯಲ್ಲವೆಂದು ಚೀನಾ ವಾದ ಮಂಡಿಸಿತ್ತು.