ರಾಜಧಾನಿಯಲ್ಲಿ ದೀಪಾವಳಿ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸುವ ಸಂದರ್ಭದಲ್ಲಿ ಸಾಕಷ್ಟು ಮಂದಿಯ ಕಣ್ಣಿಗೆ ಗಾಯಗಳಾಗಿವೆ. ಮಿಂಟೊ ಕಣ್ಣಿನ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿಯ ವೇಳೆಗೆ 17 ಮಂದಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದಿದ್ದು, ಮೂರು ಮಂದಿ ಒಳರೋಗಿಗಳಾಗಿ ದಾಖಲಾಗಿದ್ದಾರೆ. ಏಳು ಮಂದಿ ತೀವ್ರವಾಗಿ ಗಾಯಗೊಂಡವರಾದರೆ, 40ಕ್ಕೂ ಹೆಚ್ಚು ಮಂದಿಗೆ ಕಣ್ಣು ಹಾಗೂ ಕಣ್ಣಿನ ಬಳಿ ಸುಟ್ಟ ಗಾಯಗಳಾಗಿವೆ.