ಮಹಾರಾಷ್ಟ್ರ, ಅರುಣಾಚಲ ಪ್ರದೇಶದಲ್ಲಿ ಮತದಾರರ ಮತ್ತೆ ಕೈಗೆ ಅಧಿಕಾರ ದಯಪಾಲಿಸಿದ್ದು, ಹರಿಯಾಣದಲ್ಲಿ ಅತಂತ್ರ ಸ್ಥಿತಿ ಏರ್ಪಟ್ಟಿದೆ. ಏತನ್ಮಧ್ಯೆ ಈ ಮೂರು ರಾಜ್ಯಗಳಲ್ಲಿನ ಚುನಾವಣೆಯನ್ನು ಪ್ರತಿಷ್ಠೆಯ ಕಣವನ್ನಾಗಿ ಮಾಡಿಕೊಂಡಿದ್ದ ಬಿಜೆಪಿ ಮಾತ್ರ ತೀವ್ರ ಮುಖಭಂಗ ಅನುಭವಿಸಿದೆ. ಆ ನಿಟ್ಟಿನಲ್ಲಿ ಮಹಾರಾಷ್ಟ್ರದಲ್ಲಿ ಜನರು ನೀಡಿರುವ ತೀರ್ಪಿಗೆ ತಲೆಬಾಗುವುದಾಗಿ ಬಿಜೆಪಿ ನಾಯಕ ಗೋಪಿನಾಥ್ ಮುಂಡೆ ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಪಾಳಯದಲ್ಲಿ ನಿರಾಶೆಯ ಕಾರ್ಮೋಡ ಕವಿದಿದೆ. ಈ ಬಾರಿಯ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆ ಏರಿಯೇ ಸಿದ್ದ ಎಂದು ಕನಸು ಕಂಡಿದ್ದ ಬಿಜೆಪಿ-ಶಿವಸೇನೆ ಮೈತ್ರಿಕೂಟದ ಕನಸು ಭಗ್ನಗೊಂಡಂತಾಗಿದೆ. ಜನರು ತೀರ್ಪನ್ನು ಸ್ವಾಗತಿಸುವುದಾಗಿ ತಿಳಿಸಿದ ಮುಂಡೆ, ಪ್ರತಿಪಕ್ಷದಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸುವುದಾಗಿ ಹೇಳಿದ್ದಾರೆ.
ಶಿವಸೇನೆ ಮುಖಂಡ ಮನೋಹರ ಜೋಶಿ ಕೂಡ ಫಲಿತಾಂಶದ ಬಗ್ಗೆ ತೀವ್ರ ನಿರಾಶೆ ವ್ಯಕ್ತಪಡಿಸಿದ್ದು, ಈ ಚುನಾವಣೆಯಲ್ಲಿ ನಮಗೆ ಗೆಲುವು ಲಭಿಸಲಿದೆ ಎಂದು ನಂಬಿಕೆ ಇತ್ತು. ಆದರೆ ಮತದಾರ ಪ್ರಭುವಿನ ಚಿತ್ತವೇ ಬೇರೆ ಆಗಿತ್ತು. ಆಗಿರುವ ತಪ್ಪನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಉತ್ತಮ ಕೆಲಸ ಮಾಡುವುದಾಗಿ ಹೇಳಿದರು. ??????????-??????? '??' ??: ?????? ?????? </newsworld/news/national/0910/22/1091022002_1.htm>