ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮುಂದೊಂದು ದಿನ ನಾನೂ ಸಿಎಂ ಆಗ್ತೇನೆ: ಜಗನ್ (Sonia Gandhi | Jaganmohan Reddy | Y. S.R. | Rosaiah)
Feedback Print Bookmark and Share
 
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೇ ತನ್ನ ಮುಂದಿನ ರಾಜಕೀಯ ಭವಿಷ್ಯ ನಿರ್ಧರಿಸಲಿದ್ದಾರೆ ಎಂಬುದನ್ನು ಮನಗಂಡಿರುವ ಕಾಂಗ್ರೆಸ್ ಸಂಸದ ವೈ.ಎಸ್.ಜಗನ್‌ಮೋಹನ್ ರೆಡ್ಡಿ, ಮುಂದೊಂದು ದಿನ ತಾವು ಆಂಧ್ರದ ಮುಖ್ಯಮಂತ್ರಿಯಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಂದೆ ವೈ.ಎಸ್.ರಾಜಶೇಖರ ರೆಡ್ಡಿ ಸಾವಿನ ನಂತರ ಮೊದಲ ಬಾರಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಜಗನ್, ರಾಜ್ಯ ರಾಜಕೀಯಕ್ಕೆ ನನ್ನ ಮೊದಲ ಆದ್ಯತೆಯಾಗಿದೆ ಮತ್ತು ಈ ನಿಟ್ಟಿನಲ್ಲಿ ನನ್ನ ಸೇವೆಯನ್ನು ಬಳಸಿಕೊಳ್ಳುವ ವಿಚಾರ ಪಕ್ಷದ ಅಧ್ಯಕ್ಷರ ವಿವೇಚನೆಗೆ ಬಿಟ್ಟಿದ್ದು ಎಂದಿದ್ದಾರೆ.

ನನಗೆ ಈಗ 36ವರ್ಷ, ಈ ವಯಸ್ಸಿನಲ್ಲಿ ನಾನು ಮುಖ್ಯಮಂತ್ರಿ ಹುದ್ದೆ ಪಡೆಯುವುದು ಮುಖ್ಯವಲ್ಲ. ಜನರ ಒಳಿತಿಗಾಗಿ ನಾನು ಶ್ರಮ ಪಡುತ್ತೇನೆ, ಮುಂದೊಂದು ದಿನ ಮುಖ್ಯಮಂತ್ರಿ ಹುದ್ದೆ ತಾನಾಗಿಯೇ ಒಲಿದು ಬರುತ್ತದೆ ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ