ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಉಲ್ಟಾ ಹೊಡೆದ ಕೇಂದ್ರ: ಮಾಯಾ ಪ್ರತಿಮೆ ಸ್ಥಾಪನೆಗೆ ಅಸ್ತು (Mayavathi | UPA | Sonia gandhi | uttara pradesh | Congress)
ಉತ್ತರ ಪ್ರದೇಶದ ವಿವಾದಿತ ಮುಖ್ಯಮಂತ್ರಿ ಮಾಯಾವತಿ ಮತ್ತಿತರ ದಲಿತ ನಾಯಕರ ಪ್ರತಿಮೆ ಸ್ಥಾಪನೆ ಪ್ರಕರಣ ಸಂಬಂಧ ಕೇಂದ್ರ ಸರ್ಕಾರ ಉಲ್ಟಾ ಹೊಡೆದಿದೆ.
ನೋಯ್ಡಾ ಪಾರ್ಕ್‌ನಲ್ಲಿ ಮಾಯಾವತಿ ಸರ್ಕಾರ ಸ್ಥಾಪಿಸಲು ಉದ್ದೇಶಿಸಿರುವ ದಲಿತ ನಾಯಕರ ಪ್ರತಿಮೆಗಳಿಗೆ ಪರಿಸರ ಇಲಾಖೆಯಿಂದ ಯಾವುದೇ ಅನುಮತಿ ಬೇಕಿಲ್ಲ ಎಂದು ಕೇಂದ್ರ ಸರ್ಕಾರ ಸರ್ವೋಚ್ಚನ್ಯಾಯಾಲಯದಲ್ಲಿ ಹೇಳಿದೆ.
ಈ ಪ್ರತಿಮೆ ಸ್ಥಾಪನೆ ಯೋಜನೆ ಪರಿಸರ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಕೇಂದ್ರ ಸರ್ಕಾರ ವಾದಿಸಿದ್ದ ಹಿನ್ನೆಲೆಯಲ್ಲಿ ನೋಯ್ಡಾ ಪಾರ್ಕ್‌ನಲ್ಲಿ ಪ್ರತಿಮೆ ಸ್ಥಾಪನೆ ಕಾರ್ಯವನ್ನು ಸ್ಥಗಿತಗೊಳಿಸಬೇಕು ಎಂದು ಅ.9ರಂದು ಸರ್ವೋಚ್ಛನ್ಯಾಯಾಲಯ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿತ್ತು.
ಮಾಯಾವತಿ ಬಹುಕೋಟಿ ವೆಚ್ಚದಲ್ಲಿ ತನ್ನ ಹಾಗೂ ದಲಿತ ಮುಖಂಡರ ಪ್ರತಿಮೆ ಅನಾವರಣ ಕಾರ್ಯಕ್ಕೆ ಮುಂದಾಗಿದ್ದರು. ಆದರೆ ಇದು ಕೇಂದ್ರದ ಕೆಂಗಣ್ಣಿಗೆ ಗುರಿಯಾಗಿತ್ತಲ್ಲದೆ, ಭಾರೀ ವಿವಾದಕ್ಕೂ ಕಾರಣವಾಗಿತ್ತು. ಆದರೆ ಇದೀಗ ಕೇಂದ್ರ ಸರ್ಕಾರ ಏಕಾಏಕಿ ಪ್ರತಿಮೆ ಸ್ಥಾಪನೆಗೆ ಸುಗಮಹಾದಿಯನ್ನು ಒದಗಿಸಿಕೊಟ್ಟಿದೆ.