ನವದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಗೋವರ್ ಜಿ.8-201 ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಹುಸಿ ಕರೆ ಮಾಡಿ ಪ್ರಯಾಣಿಕರಲ್ಲಿ ಆತಂಕ ಮೂಡಿಸಿದ್ದ ಇನ್ಫೋಸಿಸ್ ಸಾಫ್ಟ್‌ವೇರ್ ಇಂಜಿನಿಯರ್ ಪೊಲೀಸರ ಅತಿಥಿಯಾಗಿರುವ ಘಟನೆ ಭಾನುವಾರ ನಡೆದಿದೆ.
ಬಂಧಿತ ವ್ಯಕ್ತಿ ಬೆಂಗಳೂರು ಇನ್ಫೋಸಿಸ್ ಸಂಸ್ಥೆಯ ಅವಿನಾಶ್ ಗುಪ್ತಾ ಎಂದು ಗುರುತಿಸಲಾಗಿದೆ. ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಕರೆ ಸ್ವೀಕರಿಸಿರುವ ವಿಮಾನ ನಿಲ್ದಾಣಾಧಿಕಾರಿಗಳು ದೆಹಲಿಯ ವಿಮಾನ ನಿಲ್ದಾಣದಲ್ಲಿ ವಿಮಾನ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್) ಹಾಗೂ ಸ್ಥಳೀಯ ಪೊಲೀಸರು ತಪಾಸಣಾ ಕಾರ್ಯ ನಡೆಸಿದ್ದರು. ತಪಾಸಣೆ ವೇಳೆ ಬಾಂಬ್ ಪತ್ತೆಯಾಗದೆ ಇದೊಂದು ಹುಸಿ ಕರೆ ಎಂದು ತಿಳಿದ ತಕ್ಷಣ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದರು.
ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಸಿ ಪ್ರಯಾಣಿಕರು ವಿಮಾನ ಸಿಬ್ಬಂದಿಯಲ್ಲಿ ನಡುಕ ಮೂಡಿಸಿದ್ದ ವ್ಯಕ್ತಿಗೆ ಪೊಲೀಸರು ಬಲೆ ಬೀಸಿದ್ದರು. ಕರೆ ಬಂದ ಜಾಡು ಹಿಡಿದು ಹೊರಟ ಪೊಲೀಸರಿಗೆ ಕೆಲವೇ ಕ್ಷಣಗಳಲ್ಲಿ ಕರೆ ಎಲ್ಲಿಂದ ಬಂತು ಎನ್ನುವುದನ್ನು ಪತ್ತೆ ಮಾಡಿದ ಪೊಲೀಸರು ಬೆಂಗಳೂರಿನ ಇನ್ಫೋಸಿಸ್ ಟೆಕ್ಕಿ ಅವಿನಾಶ್ ಗುಪ್ತಾನನ್ನು ಬಾಂಬ್ ಬೆದರಿಕೆ ಕರೆ ಆರೋಪದ ಮೇಲೆ ಬಂಧಿಸಿರುವುದಾಗಿ ತಿಳಿಸಿದ್ದಾರೆ.