ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದ ಬೆಳೆ ಹಾನಿಯಾಗಿರುವ ಪ್ರದೇಶಕ್ಕೆ ಕೇಂದ್ರ ಕೃಷಿ ವಿಜ್ಞಾನಿಗಳು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಎಷ್ಟು ಪ್ರಮಾಣದಲ್ಲಿ ಭೂ ಸವಕಳಿ ಆಗಿದೆ ಹಾಗೂ ಅದನ್ನು ಯಾವ ರೀತಿಯಲ್ಲಿ ಸರಿಪಡಿಸಬಹುದು ಎಂದು ರೈತರು, ಸರ್ಕಾರಕ್ಕೆ ಸಲಹೆ ನೀಡಲಿದ್ದಾರೆ. ಕೃಷಿ ವಿಜ್ಞಾನಿಗಳ ತಂಡ ಗುರುವಾರದಿಂದ ಉತ್ತರ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ರಾಯಚೂರು, ಬಳ್ಳಾರಿ, ವಿಜಾಪುರ, ಬಾಗಲಕೋಟೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಸಂಚರಿಸುವ ಈ ವಿಜ್ಞಾನಿಗಳು ಅಲ್ಲಿನ ಮಣ್ಣಿನ ಪರಿಸ್ಥಿತಿಯನ್ನು ಅವಲೋಕನ ಮಾಡಲಿದ್ದಾರೆ.