ಪಾಕಿಸ್ತಾನ ಮೂಲದ ಅಮೆರಿಕ ಪ್ರಜೆ ಡೇವಿಡ್ ಹೆಡ್ಲಿ ಉಗ್ರಗಾಮಿ ಚಟುವಟಿಕೆ ಜಾಲದ ಕುರಿತು ದೆಹಲಿ, ಮುಂಬೈ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಜಿ.ಕೆ.ಪಿಳ್ಳೈ ಭಾನುವಾರ ತಿಳಿಸಿದ್ದು, ಈ ಸಂದರ್ಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಚಿತ್ರ ನಿರ್ದೇಶಕ ಮಹೇಶ್ ಭಟ್ ಪುತ್ರ ರಾಹುಲ್ ಭಟ್ ಸೇರಿದಂತೆ ಯಾರಿಗೂ ಕ್ಲೀನ್ ಚಿಟ್ ನೀಡಿಲ್ಲ ಎಂದು ತಿಳಿಸಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ತೀವ್ರಗತಿಯಲ್ಲಿ ಮುಂದುವರಿದಿದೆ. ಅಲ್ಲದೆ, ಪ್ರಕರಣದಲ್ಲಿ ಯಾರಿಗೂ ಕ್ಲೀನ್ ಚಿಟ್ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂಬೈ ದಾಳಿ ನಡೆಯುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆಯೇ ಎಂಬ ಪ್ರಶ್ನೆಗೆ ಅದನ್ನು ನಿರಾಕರಿಸಿದ ಅವರು, ದಾಳಿ ಕುರಿತು ಈಗಾಗಲೇ ಸಾಕಷ್ಟು ವಿಚಾರಣೆ ನಡೆಸಲಾಗುತ್ತಿದೆ. ರಾಹಲ್ ಭಟ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಚಾರಣೆ ನಡೆಸುತ್ತಿರುವುದಾಗಿ ಹೇಳಿದರು.
ಮುಂಬೈ ದಾಳಿಗೂ ಮುನ್ನ ಮುಂಬೈಗೆ ಆಗಮಿಸಿದ್ದ ಹೆಡ್ಲಿಯನ್ನು ತಾನು ಭೇಟಿಯಾಗಿರುವುದಾಗಿ ಬಾಲಿವುಡ್ ಖ್ಯಾತ ನಿರ್ದೇಶಕ ಮಹೇಶ್ ಭಟ್ ಪುತ್ರ ರಾಹುಲ್ ಭಟ್ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ವಿಚಾರಣೆಯ ಎದುರಿಸುವಂತಾಗಿದೆ.