ಸ್ಪೆಕ್ಟ್ರಂ ಹಗರಣದ ಆರೋಪ ಎದುರಿಸುತ್ತಿರುವ ಕೇಂದ್ರದ ಮಾಹಿತಿ ತಂತ್ರಜ್ಞಾನ ಮತ್ತು ಸಂಪರ್ಕ ಖಾತೆ ಸಚಿವ ಎ. ರಾಜಾ ಅವರನ್ನು ಕೂಡಲೇ ಸಂಪುಟದಿಂದ ಕೈಬಿಡುವಂತೆ ಕೋರಿ ಎಐಎಡಿಎಂಕೆ ಪಕ್ಷದ ವರಿಷ್ಠೆ ಜೆ.ಜಯಲಲಿತಾ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ. ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಬೇಕೂ ಎಂದು ಅವರು ಆಗ್ರಹಿಸಿದ್ದಾರೆ.
ಪ್ರಕರಣದ ತನಿಖೆ ಕೈಗೊಂಡಿರುವ ಕೇಂದ್ರ ತನಿಖಾ ದಳ ಸಂಪರ್ಕ ಸಚಿವಾಲಯದ ಕಚೇರಿ ಮೇಲೆ ದಾಳಿ ನಡೆಸಿದೆ. ಆದರೆ ದಾಳಿ ವೇಳೆಗೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಕಣ್ಮರೆಯಾಗಿವೆ. ಈ ಹಂತದಲ್ಲಿಯೂ ರಾಜಾ ಅವರನ್ನು ಈ ಸಚಿವರಾಗಿಯೇ ಮುಂದುರಿಸಿದರೆ ಪ್ರಕರಣದ ನಿಷ್ಪಕ್ಷಪಾತ ತನಿಖೆ ಅಸಾಧ್ಯ ಎಂದು ಜಯ ಲಲಿತಾ ಅವರು ಪತ್ರದಲ್ಲಿ ಆರೋಪಿಸಿದ್ದಾರೆ.
ಸ್ಪೆಕ್ಟ್ರಂ ವಿತರಣೆಯಲ್ಲಿ ಸಾವಿರಕ್ಕೂ ಅಧಿಕ ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂಬುದಾಗಿ ಆಪಾದಿಸಿರುವ ವಿರೋಧ ಪಕ್ಷಗಳು, ರಾಜಾ ರಾಜೀನಾಮೆಗೆ ಒತ್ತಾಯಿಸಿದ್ದವು.