ಜಾರ್ಖಂಡ್ಗೆ ನಕ್ಸಲಿಸಂ ಒಂದು ಪ್ರಮುಖ ಸವಾಲು ಆಗಿದೆ ಎಂದು ಹೇಳಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಹಿಂಸೆಯಿಂದ ಸಮಸ್ಯೆ ಪರಿಹಾರವಾಗುವುದಿಲ್ಲ ಮತ್ತು ಪ್ರತಿಯೊಂದು ಸಮಸ್ಯೆಯನ್ನು ಮಾತುಕತೆ ಮೂಲಕ ಪರಹರಿಸಿಕೊಳ್ಳಬೇಕು ಎಂದು ಹೇಳಿದರು.
ಸಮಸ್ಯೆ ಪರಿಹಾರಕ್ಕೆ ಅಹಿಂಸಾ ಮಾರ್ಗ ಒಂದೇ ದಾರಿ ಎಂದು ಅವರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಧನ್ಬಾದ್ ಮತ್ತು ದುಮ್ಕಾದಲ್ಲಿ ಚುನಾವಣಾ ರಾಲಿಯನ್ನು ಉದ್ದೇಶಿಸಿ ಮಾತನಾಡಿದ ಸೋನಿಯಾ, ಶಾಂತಿಯುತ ಮಾತುಕತೆ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದರಲ್ಲಿ ಕಾಂಗ್ರೆಸ್ಗೆ ವಿಶ್ವಾಸ ಇದೆ ಎಂದರು.
ಕಾಂಗ್ರೆಸ್ ಎಲ್ಲರ ಸಮಸ್ಯೆಗಳನ್ನು ಪರಿಹರಿಸುತ್ತದೆ. ಬುಡಕಟ್ಟು ಜನಾಂಗ, ದಲಿತ ಮತ್ತು ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲಾ ವರ್ಗದ ಜನರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಕೆಲಸ ಮಾಡುತ್ತದೆ ಎಂದು ಸೋನಿಯಾ ಭರವಸೆ ನೀಡಿದರು.