ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿ ಕೆ. ರೋಸಯ್ಯ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಶನಿವಾರ ನೇಮಕ ಮಾಡಿದ್ದಾರೆ.
ಇದರಿಂದಾಗಿ ಸೆಪ್ಟೆಂಬರ್ ತಿಂಗಳಲ್ಲಿ ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ವೈ.ಎಸ್. ರಾಜಶೇಖರರೆಡ್ಡಿ ಅವರ ನಂತರ ಪಕ್ಷದ ಶಾಸಕಾಂಗ ಪಕ್ಷದ ನಾಯಕ ಯಾರಾಗಬೇಕು ಎಂಬ ವಿಷಯದ ಚರ್ಚೆಗೆ ತೆರೆ ಎಳೆದಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷ ಶುಕ್ರವಾರ ಸಭೆ ಸೇರಿ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಸೋನಿಯಾಗಾಂಧಿ ಅವರಿಗೆ ನೀಡಿತ್ತು.