ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಒಮ್ಮತ ಇದ್ರೆ ಮಾತ್ರ ಪ್ರತ್ಯೇಕ ತೆಲಂಗಾಣ: ರೋಸಯ್ಯ (Congress | Andhra Pradesh | Telangana | TRS)
Bookmark and Share Feedback Print
 
ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಸಂಬಂಧಿಸಿದಂತೆ ಸಂಸದರು ಆತುರದಿಂದ ರಾಜೀನಾಮೆ ನೀಡಬೇಡಿ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಕೆ.ರೋಸಯ್ಯ ಮನವಿ ಮಾಡಿಕೊಂಡಿದ್ದು, ಸರ್ವಸಮ್ಮತಿ ಇಲ್ಲದಿದ್ದಲ್ಲಿ ಮಸೂದೆ ಮಂಡನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗೆ ಕೇಂದ್ರ ಸರ್ಕಾರ ಬುಧವಾರ ರಾತ್ರಿ ಗ್ರೀನ್ ಸಿಗ್ನಲ್ ನೀಡಿತ್ತು. ತದನಂತರ ಕಳೆದ 11ದಿನಗಳಿಂದ ಪ್ರತ್ಯೇಕ ತೆಲಂಗಾಣ ರಾಜ್ಯಕ್ಕಾಗಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಟಿಆರ್‌ಎಸ್ ವರಿಷ್ಠ ಕೆ.ಚಂದ್ರಶೇಖರ್ ಅವರು ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿದ್ದರು. ಅಲ್ಲದೆ, ವ್ಯಾಪಕವಾಗಿ ನಡೆಯುತ್ತಿದ್ದ ಪ್ರತಿಭಟನೆ ಕೂಡ ನಿಂತಿತ್ತು.

ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗಾಗಿ ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಂಡಿರುವುದಾಗಿ ಆರೋಪಿಸಿ ಆಂಧ್ರಪ್ರದೇಶದ ಆಡಳಿತಾರೂಢ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಇದೀಗ ತೀವ್ರ ವಿರೋಧ ವ್ಯಕ್ತಪಡಿಸಿವೆ. ಅಲ್ಲದೇ, 90ಕ್ಕೂ ಅಧಿಕ ಶಾಸಕರು, ಐದು ಮಂದಿ ಸಂಸದರು, ಏಳು ಮಂದಿ ಟಿಡಿಪಿ ಎಂಎಲ್‌ಸಿಗಳು ಸಹ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜಕೀಯ ವಲಯದಲ್ಲಿ ತೀವ್ರ ಬಿಕ್ಕಟ್ಟು ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೋಸಯ್ಯ, ಪ್ರತ್ಯೇಕ ತೆಲಂಗಾಣ ರಚನೆ ಬಗ್ಗೆ ಚರ್ಚೆಯಷ್ಟೇ ನಡೆದಿದೆ. ಆ ನಿಟ್ಟಿನಲ್ಲಿ ಯಾವ ಶಾಸಕರು ಆತುರದಿಂದ ರಾಜೀನಾಮೆ ನೀಡಬೇಡಿ ಎಂದು ಮನವಿ ಮಾಡಿದರು.

ಪ್ರತ್ಯೇಕ ತೆಲಂಗಾಣ ರಚನೆ ಕುರಿತಂತೆ ವಿಧಾನಸಭೆಯಲ್ಲಿ ಒಮ್ಮತದ ಅಭಿಪ್ರಾಯದ ಬಳಿಕವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಚರ್ಚೆ ನಡೆದಿರುವಾಗಲೇ ರಾಜ್ಯ ಇಬ್ಭಾಗಿ ಹೋಗಿದೆ ಎಂಬ ಬಗ್ಗೆ ಚಿಂತಿಸಬೇಕಾಗಿಲ್ಲ ಎಂದರು.

ತೆಲಂಗಾಣ-ಆಂಧ್ರ ತಲ್ಲಣ

ಪ್ರತ್ಯೇಕ ತೆಲಂಗಾಣ ರಚನೆಗೆ ಕೇಂದ್ರ ಅಸ್ತು
ಸಂಬಂಧಿತ ಮಾಹಿತಿ ಹುಡುಕಿ