ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಉಪವಾಸ ನಿರತ ಸಂಸದನ ಸೆರೆ, ಆಸ್ಪತ್ರೆಗೆ ಸ್ಥಳಾಂತರ (Andhra MP | Rajagopal | Vijayawada | Telangana)
Bookmark and Share Feedback Print
 
ಅಖಂಡ ಆಂಧ್ರಪ್ರದೇಶಕ್ಕಾಗಿ ಆಗ್ರಹಿಸಿ ವಿಜಯವಾಡ ಸಂಸದ ನಡೆಸುತ್ತಿದ್ದ ಆಮರಣಾಂತ ಉಪವಾಸ ಐದನೇ ದಿನಕ್ಕೆ ಕಾಲಿಡುತ್ತಿರುವಂತೆ ಪೊಲೀಸರು ಬಂಧಿಸಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೇ ರೀತಿ ಉಪವಾಸ ನಡೆಸುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ಕೂಡ ತೀವ್ರ ಅಸ್ವಸ್ಥಗೊಂಡ ಕಾರಣ ಆಸ್ಪತ್ರೆಗೆ ಸೇರಿಸಲಾಗಿದೆ.

ತೆಲಂಗಾಣಕ್ಕೆ ಪ್ರತ್ಯೇಕ ರಾಜ್ಯ ಸ್ಥಾನಮಾನ ನೀಡುವ ನಿರ್ಧಾರಕ್ಕೆ ಕೇಂದ್ರ ಸರಕಾರ ಬಂದಿರುವುದನ್ನು ವಿರೋಧಿಸಿ ರಾಯಲಸೀಮೆ ಮತ್ತು ಆಂಧ್ರ ಕರಾವಳಿಯಲ್ಲಿ ಭಾರೀ ಪ್ರತಿಭಟನೆ ಹಿಂಸಾಚಾರಗಳು ನಡೆಯುತ್ತಿದ್ದು, ಹಲವು ಮುಖಂಡರು, ವಿದ್ಯಾರ್ಥಿಗಳು ಆಮರಣಾಂತ ಉಪವಾಸ ನಡೆಸುತ್ತಿದ್ದಾರೆ.

ವಿಜಯವಾಡ ಸಂಸದ ರಾಜಗೋಪಾಲ್ ಕಳೆದ ಕೆಲವು ದಿನಗಳಿಂದ ಉಪವಾಸ ನಡೆಸುತ್ತಿದ್ದರು. ಪರಿಸ್ಥಿತಿ ಹದಗೆಡುತ್ತಿರುವುದನ್ನು ಮನಗಂಡ ಪೊಲೀಸರು ಇಂದು ಅವರನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆಗೆ ಸ್ಪಂದಿಸಲು ನಿರಾಕರಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಗೋಪಾಲ್ ಆರೋಗ್ಯ ಹತೋಟಿ ತಪ್ಪುತ್ತಿದ್ದಂತೆ ಅವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಲಾರಂಭಿಸಿದ್ದರು. ಪೊಲೀಸರು ಅವರನ್ನು ಬಂಧಿಸುತ್ತಿದ್ದಂತೆ ಪ್ರಮುಖ ರಸ್ತೆಗಳನ್ನು ಬಂದ್ ಮಾಡಿ, ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದರು.

ವಿಜಯವಾಡ-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿದ ರಾಜಗೋಪಾಲ್ ಅಭಿಮಾನಿಗಳು ಮತ್ತು ಕಾಂಗ್ರೆಸ್ ಮುಖಂಡ ಎಂ. ಬುದ್ಧ ಪ್ರಸಾದ್‌ರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಇತ್ತ ಆಂಧ್ರ ಯುನಿವರ್ಸಿಟಿಯ ಹಲವು ವಿದ್ಯಾರ್ಥಿಗಳು ಸಾಮೂಹಿಕ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಅವರಲ್ಲಿ ನಾಲ್ವರು ತೀವ್ರ ಅಸ್ವಸ್ಥಗೊಂಡಿದ್ದಾರೆ.

ಅನ್ನಾಹಾರ ವರ್ಜಿಸಿದ್ದರಿಂದಾಗಿ ಜಾಂಡೀಸ್ ಮತ್ತು ರಕ್ತದೊತ್ತಡ ಸಮಸ್ಯೆಗೊಳಗಾದ ವಿದ್ಯಾರ್ಥಿಗಳನ್ನು ಪೊಲೀಸರು ವಿಶಾಖಪಟ್ಟಣದಲ್ಲಿನ ಕಿಂಗ್ ಜಾರ್ಜ್ ಆಸ್ಪತ್ರೆಗೆ ಒತ್ತಾಯಪೂರ್ವಕವಾಗಿ ದಾಖಲಿಸಿದ್ದಾರೆ.

ಅಖಂಡ ಆಂಧ್ರಕ್ಕಾಗಿ ಕಳೆದ ಎಂಟು ದಿನಗಳಿಂದ 12 ವಿದ್ಯಾರ್ಥಿಗಳು ಆಮರಣಾಂತ ಉಪವಾಸ ನಡೆಸುತ್ತಿದ್ದರು. ಆಸ್ಪತ್ರೆಗೆ ಸೇರಿಸಿದ ಹೊರತಾಗಿಯೂ ಔಷಧಿ ಅಥವಾ ಆಹಾರ ಸೇವನೆಗೆ ಪ್ರತಿಭಟನಾಕಾರರು ಒಪ್ಪುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ