ಅಕ್ರಮ ಆಸ್ತಿ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶ ನ್ಯಾ.ಪಿ.ಡಿ.ದಿನಕರನ್ ಅವರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ಬೆಂಬಲ ಸೂಚಿಸಿ ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ, ದಿನಕರನ್ ಅವರ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ ತಮ್ಮನ್ನು ಸಂಪರ್ಕಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ನ್ಯಾ.ದಿನಕರನ್ ಅವರಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡಲಾಗಿಲ್ಲ. ಕೇವಲ ದಿನಕರನ್ ಅವರ ವಿರುದ್ಧದ ಆರೋಪಗಳಿವೆಯೇ ಹೊರತು ಅವರಿಗೆ ಈ ಬಗ್ಗೆ ಮಾತನಾಡುವ ಅವಕಾಶ ನೀಡಿಲ್ಲ. ಇದೊಂದು ಗಂಭೀರ ವಿಚಾರ ಎಂದು ಮಾಯಾವತಿ ಅಭಿಪ್ರಾಯಪಟ್ಟಿದ್ದಾರೆ.