ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಪ್ರತ್ಯೇಕ ರಾಜ್ಯ:ಕೇಂದ್ರದಿಂದ ಸಮಿತಿ ರಚನೆ (Andhra Pradesh | Telangana | SRC)
Bookmark and Share Feedback Print
 
ದೇಶದಲ್ಲಿ ಎದುರಾದ ಪ್ರತ್ಯೇಕ ರಾಜ್ಯಗಳ ಬೇಡಿಕೆಯನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಲು ಕೇಂದ್ರ ಸರಕಾರ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರತ್ಯೇಕ ರಾಜ್ಯಗಳ ಬೇಡಿಕೆಗಾಗಿ ಹೆಚ್ಚುತ್ತಿರುವ ಒತ್ತಡದಿಂದಾಗಿ, ಸಮಿತಿಯನ್ನು ರಚಿಸಲು ನಿರ್ಧರಿಸಲಾಗಿದೆ.ಇದರಿಂದ ತೆಲಂಗಾಣ ಸಮಸ್ಯೆಗೆ ಪರಿಹಾರ ದೊರೆಯುವ ನಿರೀಕ್ಷೆಯಿದೆ ಎಂದು ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಹೇಳಿಕೆ ನೀಡಿದ್ದಾರೆ.

ತೆಲಂಗಾಣ ಭಾಗದಲ್ಲಿರುವ ಕಾಂಗ್ರೆಸ್ ಶಾಸಕರು ಡಿಸೆಂಬರ್ 9 ರಂದು ಪ್ರಕಟಿಸಿದ ತೆಲಂಗಾಣ ಪ್ರತ್ಯೇಕ ರಾಜ್ಯದ ನಿರ್ಧಾರವನ್ನು ಮರುಪರಿಶೀಲಿಸದಂತೆ ಪಕ್ಷದ ಮುಖಂಡರಿಗೆ ಹೇರುತ್ತಿರುವುದು ನುಂಗಲಾರದ ತುತ್ತಾಗಿದೆ.ಇಲ್ಲವಾದಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎನ್ನುವ ಘೋಷಣೆ ಹೈಕಮಾಂಡ್‌ನ್ನು ತಲ್ಲಣಗೊಳಿಸಿದೆ.

ಪ್ರತ್ಯೇಕ ರಾಜ್ಯ ಆಯ್ಕೆ ಸಮಿತಿ, ನೆನೆಗುದಿಗೆ ಬಿದ್ದಿರುವ ಪ್ರತ್ಯೇಕ ರಾಜ್ಯದ ಬೇಡಿಕೆಗಳ ವಾಸ್ತಂಶಗಳನ್ನು ಪರಿಶೀಲಿಸಿ ಸೂಕ್ತ ನಿರ್ಧಾರಕ್ಕೆ ಬರಲಿದೆ ಎಂದು ಸಚಿವ ಪಿ.ಚಿದಂಬರಂ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ