ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಪ್ರತ್ಯೇಕ ರಾಜ್ಯ ಬೇಡಿಕೆ:13 ಸಚಿವರ ರಾಜೀನಾಮೆ (Telangana | Resignation | Ministers)
Bookmark and Share Feedback Print
 
ತೆಲಂಗಾಣಾ ಪ್ರದೇಶದ 13 ಸಚಿವರು ಹಾಗೂ 60 ಮಂದಿ ಶಾಸಕರು ಸಾಮೂಹಿಕವಾಗಿ ತಮ್ಮ ರಾಜೀನಾಮೆ ಪತ್ರಗಳನ್ನು ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿಯವರಿಗೆ ರವಾನಿಸಿದ್ದು, ತೆಲಂಗಾಣಾ ರಾಜ್ಯ ಘೋಷಣೆಗೆ ಸಮಯ ನಿಗದಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಜೀನಾಮೆ ನೀಡಿದ ಸಚಿವರು ಹಾಗೂ ಶಾಸಕರು, ಸಚಿವಾಲಯದಲ್ಲಿ ಮುಖ್ಯಮಂತ್ರಿ ಕೆ.ರೋಸಯ್ಯನವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ನಿರ್ದಾರದ ಬಗ್ಗೆ ಮಾಹಿತಿ ನೀಡಿದರು ಎಂದು ಮೂಲಗಳು ತಿಳಿಸಿವೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ತೆಲಂಗಾಣ ಶಾಸಕರಾದ ಪಿ.ಲಕ್ಷ್ಮಯ್ಯ,ಕೇಂದ್ರ ಸರಕಾರ ಪ್ರತ್ಯೇಕ ತೆಲಂಗಾಣ ರಾಜ್ಯ ಘೋಷಣೆಗೆ ಸ್ಪಷ್ಟ ಸಮಯ ನಿಗದಿಪಡಿಸಬೇಕು ಎಂದು ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಪಿ.ಚಿದಂಬರಂ, ಡಿಸೆಂಬರ್ 23 ರಂದು ತೆಲಂಗಾಣ ಪ್ರತ್ಯೇಕ ರಾಜ್ಯದ ಘೋಷಣೆಯನ್ನು ಹಿಂಪಡೆದಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ತೆಲಂಗಾಣಾ, ರಾಜೀನಾಮೆ, ಸಚಿವರು