ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಇಲ್ಲ, ನಾನೇನೂ ಬ್ಲ್ಯಾಕ್‌ಮೇಲ್‌ಗೆ ಮಣಿದಿಲ್ಲ: ಯಡಿಯೂರಪ್ಪ (Yaddyurappa | Karnataka CM | BJP | Reddy Brothers | Renukacharya)
Bookmark and Share Feedback Print
 
NRB
ಭಿನ್ನಮತೀಯ ಬಣದ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ತಾನೇನೂ ರೆಡ್ಡಿ ಸಹೋದರರ ಬ್ಲ್ಯಾಕ್‌ಮೇಲ್‌ಗೆ ಮಣಿದಂತಾಗಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿರುವುದು ಸಾಮೂಹಿಕ ನಿರ್ಧಾರದಿಂದಾಗಿ ಎಂದು ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೇಣುಕಾಚಾರ್ಯ ಅವರು ಹಲವಾರು ವಿವಾದಗಳಲ್ಲಿ ಸಿಲುಕಿದ್ದು, ಅವರನ್ನೇ ಸೇರಿಸಿಕೊಳ್ಳುವ ಮೂಲಕ ಜನತೆಗೆ ಯಾವ ಸಂದೇಶ ನೀಡಿದಂತಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, 'ರಾಜಕೀಯದಲ್ಲಿ ನಾವು ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳಲೇಬೇಕಾಗುತ್ತದೆ. ಕೆಲವೊಮ್ಮೆ ನಾವದನ್ನು ಇಷ್ಟಪಡಬಹುದು, ಇಷ್ಟಪಡದೆಯೂ ಇರಬಹುದು. ಪಕ್ಷದ ಶಾಸಕರು ಅವರ ಸಂಪುಟ ಸೇರ್ಪಡೆಗೆ ಇಚ್ಛಿಸಿದ್ದರು' ಎಂದರು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ 85ನೇ ಹುಟ್ಟು ಹಬ್ಬದ ಸಂದರ್ಭ ಅವರನ್ನು ಮತ್ತು ಬಿಜೆಪಿ ಹೊಸ ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿ ಅವರನ್ನು ಅಭಿನಂದಿಸಲೆಂದು ಯಡಿಯೂರಪ್ಪ ದೆಹಲಿಗೆ ಬಂದಿದ್ದರು.

ಸದ್ಯಕ್ಕೆ ಸಂಪುಟ ವಿಸ್ತರಣೆಯಿಲ್ಲ, ಸರಕಾರವು ಎರಡು ವರ್ಷ ಅಧಿಕಾರವಧಿಯನ್ನು ಪೂರ್ಣಗೊಳಿಸಿದ ಬಳಿಕವಷ್ಟೇ ಹಿರಿಯರಿಗೆ ಹೊಸ ಜವಾಬ್ದಾರಿಗಳನ್ನು ನೀಡಲಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರೆಡ್ಡಿ ಸಹೋದರರು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದಾರೆ ಎಂಬ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಆರೋಪಿಸಿರುವ ಕುರಿತು ಪ್ರತಿಕ್ರಿಯಿಸಿದ ಯಡಿಯೂರಪ್ಪ, 'ಈ ಆರೋಪದಲ್ಲಿ ಸತ್ಯಾಂಶವಿಲ್ಲ. ಬೇರೆ ರಾಜ್ಯದ ಬಗ್ಗೆ ನನಗೆ ಗೊತ್ತಿಲ್ಲ, ಆದರೆ ಕರ್ನಾಟಕದ ಮಟ್ಟಿಗೆ ಈ ಆರೋಪದಲ್ಲಿ ಹುರುಳಿಲ್ಲ' ಎಂದುತ್ತರಿಸಿದರು.
ಸಂಬಂಧಿತ ಮಾಹಿತಿ ಹುಡುಕಿ