ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯ ನಿರ್ಧಾರದ ಕುರಿತಂತೆ ವಿವಿಧ ರಾಜಕೀಯ ಪಕ್ಷಗಳನ್ನೊಳಗೊಂಡ ಜಂಟಿ ಕ್ರಿಯಾ ಸಮಿತಿ ಕೇಂದ್ರ ಸರ್ಕಾರಕ್ಕೆ ಸೋಮವಾರದವರೆಗೆ ಗಡುವು ನೀಡಿದೆ.
ಒಂದು ವೇಳೆ ಕೇಂದ್ರ ಸರ್ಕಾರ ತೆಲಂಗಾಣ ಪ್ರತ್ಯೇಕ ರಾಜ್ಯ ಘೋಷಿಸದಿದ್ದರೆ ಡಿ.29ರಿಂದ ಅನಿರ್ದಿಷ್ಟಾವಧಿ ಬಂದ್‌ಗೆ ಕರೆ ನೀಡುವುದಾಗಿ ಟಿಆರ್‌ಎಸ್ ವರಿಷ್ಠ ಚಂದ್ರಶೇಖರ ರಾವ್ ಎಚ್ಚರಿಕೆ ನೀಡಿದ್ದಾರೆ.
ಅಲ್ಲದೇ, ತೆಲಂಗಾಣ, ಹೈದರಾಬಾದ್ ಪ್ರಾಂತ್ಯಗಳಲ್ಲಿ ಹಿಂಸಾಚಾರ ತೀವ್ರಗೊಂಡಿದ್ದು, ಬಸ್‌ಗಳಿಗೆ ಬೆಂಕಿ ಹಚ್ಚಲಾಗಿದೆ. ಏತನ್ಮಧ್ಯೆ ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆಗೆ ಸಂಬಂಧಿಸಿದಂತೆ ಉಗ್ರ ಸ್ವರೂಪದ ಹೋರಾಟಕ್ಕೆ ಮುಂದಾಗಬೇಕೆಂದು ಕೂಡ ಕರೆ ನೀಡಿದ್ದಾರೆ.
ಉಸ್ಮಾನಿಯಾ ಯೂನಿರ್ವಸಿಟಿ ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ಭಾನುವಾರಕ್ಕೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯದಲ್ಲಿ ಶಾಂತಿ ಕಾಪಾಡಬೇಕೆಂದು ಮುಖ್ಯಮಂತ್ರಿ ಕೆ.ರೋಸಯ್ಯ ಮನವಿ ಮಾಡಿಕೊಂಡಿದ್ದರೂ ಸಹ ಯಾವುದೇ ಪ್ರಯೋಜನ ಇಲ್ಲದಂತಾಗಿದೆ.