ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಕಾಂಗ್ರೆಸ್ ಕೇವಲ ಪಕ್ಷವಲ್ಲ, ರಾಷ್ಟ್ರೀಯ ಕ್ರಾಂತಿ: ಸೋನಿಯಾ (Congress party | 125th anniversary | Sonia Gandhi | Indira Gandhi)
Bookmark and Share Feedback Print
 
ಕಾಂಗ್ರೆಸ್ ಎನ್ನುವುದು ಕೇವಲ ಪಕ್ಷವಲ್ಲ, ಇದೊಂದು ರಾಷ್ಟ್ರೀಯ ಕ್ರಾಂತಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬಣ್ಣಿಸಿದ್ದಾರೆ.

ಕಾಂಗ್ರೆಸ್ ಪಕ್ಷದ 125ನೇ ಸಂಸ್ಥಾಪನಾ ಸಂಭ್ರಮಾಚರಣೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಗಾಂಧಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಾ, ಬ್ರಿಟೀಷ್ ವಸಾಹತು ನೀತಿಯಿಂದ ಸ್ವಾತಂತ್ರ್ಯದತ್ತ ದೇಶವನ್ನು ಮುನ್ನಡೆಸಿದ ಕಾಂಗ್ರೆಸ್ ಯಾವತ್ತೂ ಜಾತ್ಯತೀತ ಮೌಲ್ಯಗಳಿಗೆ ಬೆಲೆ ನೀಡುತ್ತದೆ ಎಂದರು.
Sonia Gandhi
PTI


ಕಾಂಗ್ರೆಸ್ ಪಕ್ಷವು ಯಾವತ್ತೂ ಬಹುಮತ ಪದ್ಧತಿಗಳಿಗೆ ಬೆಂಬಲ ನೀಡುತ್ತಾ ಜಾತ್ಯತೀತತೆಯನ್ನು ಅನುಸರಿಸಿಕೊಂಡು ಬಂದಿದೆ. ಅಲ್ಲದೆ ದೀನದಲಿತರ ಹಕ್ಕುಗಳನ್ನು ರಕ್ಷಿಸುವ ಕೆಲಸವನ್ನೂ ಮಾಡುತ್ತಿದೆ ಎಂದು ಸೋನಿಯಾ ಇದೇ ಸಂದರ್ಭದಲ್ಲಿ ಹೆಮ್ಮೆಯಿಂದ ಹೇಳಿಕೊಂಡರು.

ಅಲ್ಲದೆ ಆಧುನಿಕ ಭಾರತದ ನಿರ್ಮಾಣಕ್ಕಾಗಿ ಅಡಿಗಲ್ಲು ಹಾಕುವಲ್ಲಿ ಕಾಂಗ್ರೆಸ್ ಪಾತ್ರ ಮಹತ್ವದ್ದಾಗಿದೆ. ದೇಶದ ಅಭಿವೃದ್ಧಿಯಲ್ಲಿ ಪಕ್ಷದ ಪಾತ್ರ ಪ್ರಮುಖವಾದದ್ದು ಎಂದು ಅಭಿಪ್ರಾಯಪಟ್ಟರು.

ಇದಕ್ಕೂ ಮೊದಲು ಕಾಂಗ್ರೆಸ್ ನೂತನ ಪ್ರಧಾನ ಕಚೇರಿಯ ಅಡಿಗಲ್ಲು ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ಮನಮೋಹನ್ ಸಿಂಗ್, ಬಡವರ ಏಳಿಗೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಕಾರ್ಯವನ್ನು ತನ್ನ ಸರಕಾರ ಮಾಡುತ್ತಿದ್ದು, ಮುಂದೆಯೂ ಮುಂದುವರಿಸಲಿದೆ ಎಂದರು.

ರಾಷ್ಟ್ರೀಯ ಕಾಂಗ್ರೆಸ್ ಪಕ್ಷವನ್ನು 1885ರಲ್ಲಿ ಸಂಸ್ಥಾಪಿಸಲಾಗಿತ್ತು.
ಸಂಬಂಧಿತ ಮಾಹಿತಿ ಹುಡುಕಿ