ವಿಶ್ವವಿದ್ಯಾಲಯದ ಅನುದಾನ ಸಮಿತಿಯ ನಿಯಮಾವಳಿಗಳನ್ನು ಉಲ್ಲಂಘಿಸಿದ 44 ಡೀಮ್ಡ್ ವಿಶ್ವವಿದ್ಯಾಲಯಗಳನ್ನು ರದ್ದುಗೊಳಿಸಲು ತೀರ್ಮಾನಿಸಿರುವುದಾಗಿ ಕೇಂದ್ರ ಸರಕಾರ ಅಪೆಕ್ಸ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.
ಆದಾಗ್ಯೂ, ರದ್ದುಗೊಳಿಸಲಿರುವ ವಿಶ್ವವಿದ್ಯಾಲಯಗಳ 2ಲಕ್ಷ ವಿದ್ಯಾರ್ಥಿಗಳಿಗೆ ಅಧಿಕೃತ ವಿಶ್ವವಿದ್ಯಾಲಯದ ಕಾಲೇಜ್‌ಗಳಲ್ಲಿ ಪ್ರವೇಶ ಪಡೆಯಲು ಅನುಮತಿ ನೀಡಲಾಗುವುದು ಎಂದು ಕೇಂದ್ರ ಸರಕಾರ ಅಪೆಕ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಿಳಿಸಿದೆ.
ದೇಶದ 126 ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ 44 ವಿಶ್ವ ವಿದ್ಯಾಲಯಗಳನ್ನು ರದ್ದುಗೊಳಿಸುವಂತೆ ಪಿ.ಎನ್ ಟಂಡನ್ ಸಮಿತಿ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.