ಜಮ್ಮು-ಕಾಶ್ಮೀರದ ಪ್ರಜಾಸತ್ತಾತ್ಮಕ ಸ್ವಾತಂತ್ರ್ಯ ಪಕ್ಷದ ಅಧ್ಯಕ್ಷ ಶಬೀರ್ ಅಹ್ಮದ್ ಷಾ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. ಅಶ್ರುವಾಯು ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ್ದ ವಾನಿಕ್ ಫಾರೂಕ್ ಅವರ ಶವ ಸಂಸ್ಕಾರದಲ್ಲಿ ಪಾಲ್ಗೊಳ್ಳುವುದನ್ನು ತಡೆಯುವ ನಿಟ್ಟಿನಲ್ಲಿ ಷಾ ಅವರನ್ನು ಗೃಹ ಬಂಧನದಲ್ಲಿ ಇಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.