1984ರ ಸಿಖ್ ಹಿಂಸಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಎರಡು ಆರೋಪ ಪಟ್ಟಿಗಳ ಸಂಬಂಧಿಸಿದಂತೆ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್ ಕುಮಾರ್ ಹಾಗೂ ಮತ್ತಿತರರಿಗೆ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. 62ರ ಹರೆಯದ ಸಜ್ಜನ್ ಕುಮಾರ್ ಅವರು, ಅವರ ವಿರುದ್ಧ ದಾಖಲಾಗಿರುವ ಆರೋಪ ಪಟ್ಟಿಗಳ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಬೇಕಾಗಿದೆ ಎಂದು ಹೆಚ್ಚುವರಿ ಮೆಟ್ರೋಪಾಲಿಟನ್ ನ್ಯಾಯಮೂರ್ತಿ ಲೋಕೇಶ್ ಕುಮಾರ್ ಸೂಚಿಸಿದ್ದಾರೆ.