ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಕಾಂಗ್ರೆಸ್ ಮುಸ್ಲಿಮರನ್ನು ಮೂರ್ಖರನ್ನಾಗಿಸಲು ಹೊರಟಿದೆ: ಬಿಜೆಪಿ ಕಿಡಿ (BJP | Congress | Muslim reservation quota | West Bengal)
Bookmark and Share Feedback Print
 
ಮೀಸಲಾತಿಯ ಮೂಲಕ ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ಮತ್ತು ಎಡಪಕ್ಷಗಳು ಮುಸ್ಲಿಮರನ್ನು ಮೂರ್ಖರನ್ನಾಗಿಸಲು ಹೊರಟಿದೆ ಎಂದು ಟೀಕಿಸಿರುವ ಬಿಜೆಪಿ, ಆಂಧ್ರಪ್ರದೇಶ ಉಚ್ಚ ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿದೆ.

ಆಂಧ್ರಪ್ರದೇಶ ಕಾಂಗ್ರೆಸ್ ಸರಕಾರ ಮುಸ್ಲಿಮರಿಗೆ ಸರಕಾರಿ ಉದ್ಯೋಗ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಶೇ.4ರ ಮೀಸಲಾತಿ ಜಾರಿಗೊಳಿಸಿತ್ತು. ಆದರೆ ಇದನ್ನು ಹೈಕೋರ್ಟ್ ನಿನ್ನೆ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಇದೇ ಹೊತ್ತಿಗೆ ಅತ್ತ ಪಶ್ಚಿಮ ಬಂಗಾಲದಲ್ಲಿ ಸಿಪಿಎಂ ಸರಕಾರವು ಇತರ ಹಿಂದುಳಿದ ವರ್ಗಗಳ (ಒಬಿಸಿ) ಕೋಟಾದ ಅಡಿಯಲ್ಲಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಮುಸ್ಲಿಮರಿಗೆ ಶೇ.10ರ ಮೀಸಲಾತಿಯನ್ನು ನೀಡುವುದಾಗಿ ಪ್ರಕಟಿಸಿದೆ.

ಕಾಂಗ್ರೆಸ್ ಮತ್ತು ಕಮ್ಯೂನಿಸ್ಟ್ ಪಕ್ಷಗಳ ವರ್ತನೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ವಕ್ತಾರ ಪ್ರಕಾಶ್ ಜಾವಡೇಕರ್, 'ಉಚ್ಚ ನ್ಯಾಯಾಲಯದ ಆದೇಶವನ್ನು ಬಿಜೆಪಿ ಸ್ವಾಗತಿಸುತ್ತದೆ. ಆಂಧ್ರಪ್ರದೇಶದ ವರ್ತನೆಯು ಸಂವಿಧಾನ ವಿರೋಧಿಯಾಗಿತ್ತು ಮತ್ತು ರಾಜಕೀಯ ಪ್ರೇರಿತವಾಗಿತ್ತು. ಕಾಂಗ್ರೆಸ್ ಸರಕಾರವು ಸಂವಿಧಾನದ ಪಾವಿತ್ರ್ಯತೆಯನ್ನು ಭಂಗ ಮಾಡಿದೆ' ಎಂದರು.

ಅಲ್ಲದೆ ಧರ್ಮಾಧರಿತ ಮೀಸಲಾತಿಯನ್ನು ಮುಸ್ಲಿಮರಿಗೆ ನೀಡುವ ಮೂಲಕ ಅವರನ್ನು ಮೂರ್ಖರನ್ನಾಗಿಸಲು ಕಾಂಗ್ರೆಸ್ ಹೊರಟಿದೆ. ಕಾಂಗ್ರೆಸ್ಸಿನ ಈ ಕುತಂತ್ರವನ್ನು ಮುಸ್ಲಿಮರು ಅರ್ಥ ಮಾಡಿಕೊಳ್ಳುತ್ತಾರೆ ಎಂಬ ವಿಶ್ವಾಸ ನಮ್ಮದು ಎಂದು ಅವರು ತಿಳಿಸಿದ್ದಾರೆ.

ಪ್ರಸಕ್ತ ಕರ್ನಾಟಕ ಮತ್ತು ತಮಿಳುನಾಡು ಸರಕಾರಗಳು ಮುಸ್ಲಿಮರಿಗೆ ಉದ್ಯೋಗ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಶೇ.4ರ ಮೀಸಲಾತಿಯನ್ನು ನೀಡುತ್ತಿವೆ. ಹಾಗಾಗಿ ಆಂಧ್ರ ಹೈಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ನಾವು ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿದ್ದೇವೆ ಎಂದು ಆಂಧ್ರಪ್ರದೇಶ ಸರಕಾರ ಪ್ರತಿಕ್ರಿಯೆ ನೀಡಿದೆ. ಹೈಕೋರ್ಟ್ ನಿರ್ಧಾರ ಹೊರ ಬೀಳುತ್ತಿದ್ದಂತೆ ಮುಸ್ಲಿಂ ಸಮುದಾಯ ಭಾರೀ ಆಕ್ರೋಶ ವ್ಯಕ್ತಪಡಿಸಿತ್ತು.

ಪಶ್ಚಿಮ ಬಂಗಾಲ ಸರಕಾರದ ನಿರ್ಧಾರಕ್ಕೆ ಪ್ರತಿಕ್ರಿಯಿಸುತ್ತಾ, ಈಗಿನ ವಿಷಾದಕರ ನೀತಿಗೆ ಕಮ್ಯೂನಿಸ್ಟರೇ ಸಂಪೂರ್ಣ ಹೊಣೆಗಾರರು. ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ಅವರು ಕೂಡ ಕಾಂಗ್ರೆಸ್ ಹಾದಿಯಲ್ಲೇ ಹೆಜ್ಜೆ ಹಾಕುತ್ತಿದ್ದಾರೆ. ಇವೆರಡೂ ಪಕ್ಷಗಳ ನಿರ್ಧಾರವನ್ನು ನಾವು ಖಂಡಿಸುತ್ತಿದ್ದೇವೆ ಎಂದು ಬಿಜೆಪಿ ತಿಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ