ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮುತಾಲಿಕ್‌ಗೆ ಮಸಿ ಖಂಡನಾರ್ಹ, ಕಾಂಗ್ರೆಸ್ಸಿಗರನ್ನು ಬಂಧಿಸಿ: ಸ್ವಾಮಿ (Janata Party | Subramanian Swamy | Sri Rama Sene | Pramod Mutalik)
Bookmark and Share Feedback Print
 
ಶ್ರೀರಾಮ ಸೇನೆ ನಾಯಕ ಪ್ರಮೋದ್ ಮುತಾಲಿಕ್ ಅವರ ಮುಖಕ್ಕೆ ಮಸಿ ಬಳಿದಿರುವುದನ್ನು ಪ್ರಜಾಪ್ರಭುತ್ವ ವಿರೋಧಿ ನಡವಳಿಕೆ ಎಂದು ಬಣ್ಣಿಸಿರುವ ಜನತಾ ಪಕ್ಷದ ಅಧ್ಯಕ್ಷ ಸುಬ್ರಮಣ್ಯನ್ ಸ್ವಾಮಿ, ಘಟನೆಯ ಹಿಂದಿರುವ ಶಂಕಿತ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಯುವತಿಯೊಬ್ಬಳ ಮೇಲೆ ನಡೆದ ಮಂಗಳೂರು ಪಬ್ ದಾಳಿಯನ್ನು ಉಲ್ಲೇಖಿಸುತ್ತಾ ಅವರು, 'ಮುತಾಲಿಕ್ ಇಂತಹುದೇ ಕೃತ್ಯವನ್ನು ಈ ಹಿಂದೆ ಮಂಗಳೂರಿನಲ್ಲಿ ನಡೆಸಿದ್ದರಾದರೂ, ಪ್ರಸಕ್ತ ದಾಳಿ ಪ್ರಜಾಪ್ರಭುತ್ವವಿರೋಧಿ ಮತ್ತು ಪುಂಡತನದ ಕೃತ್ಯವಾಗಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ' ಎಂದಿದ್ದಾರೆ.

ಯಾರೊಬ್ಬರೂ ಕಾನೂನನ್ನು ಕೈಗೆ ತೆಗೆದುಕೊಳ್ಳಲು ಮತ್ತು ನೈತಿಕ ನ್ಯಾಯ ನೀಡಲು ಅವಕಾಶ ನೀಡಬಾರದು ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿರುವ ಸ್ವಾಮಿ, ಕಾನೂನು ವಿರೋಧಿ ಕಾಯ್ದೆ ಅಡಿಯಲ್ಲಿ ಘಟನೆಗೆ ಕಾರಣರಾದ ಯುವ ಕಾಂಗ್ರೆಸ್ ನಾಯಕರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ವ್ಯಾಲೆಂಟೈನ್ಸ್ ಡೇ ಭಾರತೀಯ ಸಂಸ್ಕೃತಿಯಲ್ಲ ಎಂದು ಹೇಳುತ್ತಾ ಬಂದಿರುವ ಮುತಾಲಿಕ್, ಆ ದಿನ ಅಕ್ರಮ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಜೋಡಿಗಳಿಗೆ ಮದುವೆ ಮಾಡಿಸುವುದಾಗಿ ಹೇಳಿದ್ದರು. ಇದೇ ಕುರಿತಾಗಿ ಬೆಂಗಳೂರಿನಲ್ಲಿ ಖಾಸಗಿ ಚಾನೆಲ್ ಒಂದು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮುತಾಲಿಕ್ ಮೇಲೆ ಒಮ್ಮಿಂದೊಮ್ಮೆಲೇ ದಾಳಿ ನಡೆಸಿದ್ದ ಕಾಂಗ್ರೆಸ್ ಕಾರ್ಯಕರ್ತರು ಅವರ ಮುಖಕ್ಕೆ ಮಸಿ ಬಳಿದಿದ್ದರು.

ಅದೇ ಹೊತ್ತಿಗೆ ಶಾರೂಖ್ ಖಾನ್ ನಾಯಕರಾಗಿರುವ 'ಮೈ ನೇಮ್ ಈಸ್ ಖಾನ್' ಚಿತ್ರ ಬಿಡುಗಡೆಗೆ ಅಡ್ಡಿ ಮುಂದುವರಿಸಿದಲ್ಲಿ ಶಿವಸೇನೆ ನಾಯಕ ಉದ್ಧವ್ ಠಾಕ್ರೆಗೆ ನೀಡಲಾಗಿರುವ ಭದ್ರತೆಯನ್ನು ಹಿಂದಕ್ಕೆ ಪಡೆಯುವುದಾಗಿ ಬೆದರಿಕೆ ಹಾಕಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ಅಶೋಕ್ ಚೌಹಾನ್ ಹೇಳಿಕೆ ತನಗೆ ಅಚ್ಚರಿ ತಂದಿದೆ ಎಂದು ಸ್ವಾಮಿ ತಿಳಿಸಿದ್ದಾರೆ.

ಚೌಹಾನ್ ಹೇಳಿಕೆಯನ್ನು ಬೇಜವಾಬ್ದಾರಿತನದ್ದು ಎಂದಿರುವ ಸ್ವಾಮಿ, ಅವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಧಿಕಾರದಲ್ಲಿರುವವರಿಗೆ ಉತ್ತಮವಾಗಿ ಕಾಣಿಸುವ ವರ್ತನೆ ತೋರಿಸುವವರಿಗೆ ನೀಡುವ ಕೊಡುಗೆಯಲ್ಲ ಭದ್ರತೆ ಎಂದು ಅವರು ಮಹಾರಾಷ್ಟ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡರು.
ಸಂಬಂಧಿತ ಮಾಹಿತಿ ಹುಡುಕಿ