ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಸಿಖ್ ವಿರೋಧಿ ಗಲಭೆ; ಬಂಧನ ಭೀತಿಯಲ್ಲಿ ಸಜ್ಜನ್ ಕುಮಾರ್ (1984 riots | Congress leader | Sajjan Kumar | anti-Sikh riots case)
Bookmark and Share Feedback Print
 
1984ರ ಸಿಖ್ ವಿರೋಧಿ ಹಿಂಸಾಚಾರ ಪ್ರಕರಣಗಳಿಗೆ ಸಂಬಂಧಪಟ್ಟಂತೆ ನಗರದ ನ್ಯಾಯಾಲಯವೊಂದು ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಮತ್ತು ಇತರ ಏಳು ಮಂದಿಗೆ ಜಾಮೀನುರಹಿತ ವಾರಂಟ್ ಜಾರಿಗೊಳಿಸಿದ್ದು, ಯಾವುದೇ ಕ್ಷಣದಲ್ಲಿ ಬಂಧನಕ್ಕೊಳಗಾಗುವ ಸಾಧ್ಯತೆಗಳಿವೆ. ಇದೇ ಹಿನ್ನೆಲೆಯಲ್ಲಿ ಅವರು ತಲೆ ಮರೆಸಿಕೊಂಡಿದ್ದಾರೆ ಎಂದು ವರದಿಗಳು ಹೇಳಿವೆ.

ಬುಧವಾರ ನ್ಯಾಯಾಲಯವೊಂದು ಜಾಮೀನು ರಹಿತ ವಾರಂಟ್ ಜಾರಿಗೊಳಿಸುತ್ತಿದ್ದಂತೆ ಇತ್ತ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಆದರೆ ಅದರ ವಿಚಾರಣೆಯನ್ನು ನ್ಯಾಯಾಲಯವು ಗುರುವಾರಕ್ಕೆ ಮುಂದೂಡಿದೆ.
ಕರ್ಕರ್ದುಮಾ ನ್ಯಾಯಾಲಯದ ಅಡಿಶನಲ್ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಲೋಕೇಶ್ ಅವರು ಜಾಮೀನು ರಹಿತ ವಾರಂಟ್ ಜಾರಿ ಮಾಡಿದ್ದಾರೆ. ಅವಧಿಯೊಳಗೆ ಸಜ್ಜನ್ ಕುಮಾರ್ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಆದರೆ ಅವರು ವಿಫಲರಾಗಿದ್ದಾರೆ. ಹಾಗಾಗಿ ಕಠಿಣ ಕ್ರಮವನ್ನು ಅವರು ಎದುರಿಸಬೇಕಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.

ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಸಿಬಿಐ ಯಾವುದೇ ಕ್ಷಣದಲ್ಲಿ ಸಜ್ಜನ್ ಕುಮಾರ್ ಅವರನ್ನು ಬಂಧಿಸುವ ಸಾಧ್ಯತೆಗಳಿವೆ.

ಕೆಳಗಿನ ವಿಚಾರಣಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನಿರಾಕರಿಸಿದ ಹಿನ್ನೆಲೆಯಲ್ಲಿ ಎಲ್ಲಾ ಏಳು ಆರೋಪಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ಅವರಲ್ಲಿ ಬ್ರಹ್ಮಾನಂದ ಮತ್ತು ಪೆರು ಎಂಬ ಆರೋಪಿಗಳ ಬಂಧನಕ್ಕೆ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ. ಉಳಿದ ಐದು ಮಂದಿಯ ಅರ್ಜಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಲಾಗಿದೆ.

1984ರ ಅಕ್ಟೋಬರ್ 31ರಂದು ಪ್ರಧಾನ ಮಂತ್ರಿ ಇಂದಿರಾ ಗಾಂಧಿಯವರ ಹತ್ಯೆ ನಡೆದ ನಂತರ ದೆಹಲಿಯಲ್ಲಿ ನಡೆದಿದ್ದ ಸಿಖ್ ವಿರೋಧಿ ಹಿಂಸಾಚಾರದಲ್ಲಿ ಸುಮಾರು 3,000ಕ್ಕೂ ಹೆಚ್ಚು ಸಿಖ್ಖರು ಬಲಿಯಾಗಿದ್ದರು. ಇದರ ಹಿಂದೆ ಸಜ್ಜನ್ ಕುಮಾರ್ ಮತ್ತು ಇತರ ಆರು ಮಂದಿ ಆರೋಪಿಗಳೆಂದು ಹೆಸರಿಸಲಾಗಿದ್ದು, ಸಿಬಿಐ ತನಿಖೆ ನಡೆಸುತ್ತಿದೆ.
ಸಂಬಂಧಿತ ಮಾಹಿತಿ ಹುಡುಕಿ