ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮಹಿಳಾ ಮೀಸಲಾತಿಗೆ ಸಂಪುಟ ಅಸ್ತು; ಶೀಘ್ರದಲ್ಲೇ ಜಾರಿ? (Union Cabinet | Women's quota bill | Lok Sabha | Parliament)
Bookmark and Share Feedback Print
 
ದೇವೇಗೌಡರು ಪ್ರಧಾನಮಂತ್ರಿಯಾದಾಗಿನಿಂದ ನೆನೆಗುದಿಗೆ ಬಿದ್ದಿರುವ ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಚಿವ ಸಂಪುಟವು ಗುರುವಾರ ಒಪ್ಪಿಗೆ ಸೂಚಿಸಿದ್ದು, ಇದು ಜಾರಿಯಾದಲ್ಲಿ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರು ಶೇ.33ರ ಅನುಗುಣವಾಗಿ ಸ್ಥಾನಗಳನ್ನು ಪಡೆಯಲಿದ್ದಾರೆ.

ಹೆಚ್.ಡಿ. ದೇವೇಗೌಡ ನೇತೃತ್ವದ ಸಂಯುಕ್ತ ರಂಗ ಅಧಿಕಾರದಲ್ಲಿದ್ದ 1996ರ ಸೆಪ್ಟೆಂಬರ್ ತಿಂಗಳಲ್ಲಿ ಮೊತ್ತ ಮೊದಲ ಬಾರಿಗೆ ಈ ಕರಡು ಪ್ರಸ್ತಾವನೆಯನ್ನು ಮಾಡಲಾಗಿತ್ತು. ಆ ಬಳಿಕ 14 ವರ್ಷಗಳಿಂದ ಈ ಮಸೂದೆ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದ ನೆನೆಗುದಿಗೆ ಬಿದ್ದಿತ್ತು.

ಪ್ರಧಾನಿ ಮನಮೋಹನ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಶೇ.33ರ ಮಹಿಳಾ ಮೀಸಲಾತಿ ಮಸೂದೆಗೆ ಅಂಗೀಕಾರ ನೀಡಲಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಸ್ವಾಗತಿಸಿವೆ.

ಸಂಸತ್ ಅಧಿವೇಶನದ ಅವಧಿಯಲ್ಲೇ ಈ ಮಹಿಳಾ ಮೀಸಲಾತಿ ಮಸೂದೆಯು ಜಾರಿಗೆ ಬರುವ ಸಾಧ್ಯತೆಗಳಿವೆ. 'ಮಹಿಳಾ ಮೀಸಲಾತಿ ವಿಧೇಯಕವನ್ನು ಸಂಪುಟವು ಇಂದು ಅಂಗೀಕರಿಸಿದೆ. ಸಂಸತ್ತಿನ ಬಜೆಟ್ ಅಧಿವೇಶನದ ಸಂದರ್ಭದಲ್ಲೇ ಇದನ್ನು ಜಾರಿಗೆ ತರುವ ಸಾಧ್ಯತೆಗಳಿವೆ' ಎಂದು ಮೂಲಗಳು ಹೇಳಿವೆ.

ಈ ಮಸೂದೆಗೆ ಸಂಬಂಧಪಟ್ಟಂತೆ ಸ್ಥಾಯಿ ಸಮಿತಿ ವರದಿಯನ್ನು ಸಮಾಜವಾದಿ ಪಕ್ಷ, ಸಂಯುಕ್ತ ಜನತಾದಳ ಮತ್ತು ರಾಷ್ಟ್ರೀಯ ಜನತಾದಳ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಸಂಸತ್ತಿನ ಎರಡೂ ಸದನಗಳಲ್ಲಿ 2009ರ ಡಿಸೆಂಬರ್ 17ರಂದು ಮಂಡಿಸಲಾಗಿತ್ತು.
ಸಂಬಂಧಿತ ಮಾಹಿತಿ ಹುಡುಕಿ