ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಜಮ್ಮು-ಕಾಶ್ಮೀರದಲ್ಲೀಗ ಮಾಜಿ ಭಯೋತ್ಪಾದಕರೂ ಪೊಲೀಸರು! (Former militants | special police officers | Jammu and Kashmir | extremism)
Bookmark and Share Feedback Print
 
ಜಮ್ಮು-ಕಾಶ್ಮೀರದಲ್ಲಿ ವಿಶೇಷ ಪೊಲೀಸ್ ಅಧಿಕಾರಿಗಳಾಗಿ ಪ್ರತ್ಯೇಕತಾವಾದಿಗಳನ್ನು ಮಟ್ಟ ಹಾಕಲು ಹಗಲಿರುಳು ಶ್ರಮಿಸಿಸುತ್ತಿದ್ದ ಸುಮಾರು 36 ಶರಣಾಗತ ಉಗ್ರರನ್ನು ರಾಜ್ಯ ಪೊಲೀಸ್ ಇಲಾಖೆಗೆ ಸೇರಿಸಿಕೊಳ್ಳಲಾಗಿದೆ.

ಸಮಾರಂಭವೊಂದರಲ್ಲಿ ಈ ಮಾಜಿ ಭಯೋತ್ಪಾದಕರಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಕುಲದೀಪ್ ಖೋಡಾ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದ್ದಾರೆ.

ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ವಿಶೇಷ ಪೊಲೀಸ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದವರ ಕಾರ್ಯಕ್ಷಮತೆಯನ್ನು ಗುರುತಿಸಿ ಸಂಬಂಧಪಟ್ಟ ಜಿಲ್ಲಾ ಪೊಲೀಸ್ ಮುಖ್ಯಸ್ಥರ ಶಿಫಾರಸಿನಂತೆ ಪೊಲೀಸ್ ಕಾನ್ಸ್‌ಟೇಬಲ್‌ಗಳಾಗಿ ಪರಿಗಣಿಸಲಾಗಿದೆ ಎಂದರು.

ತ್ವರಿತಗತಿಯಲ್ಲಿ ಇನ್ನೂ ಹೆಚ್ಚಿನ ವಿಶೇಷ ಪೊಲೀಸ್ ಅಧಿಕಾರಿಗಳನ್ನು ಪೊಲೀಸ್ ಕಾನ್ಸ್‌ಟೇಬಲ್‌ಗಳಾಗಿ ನೇಮಕ ಮಾಡಲಾಗುತ್ತದೆ ಎಂದು ಖೋಡಾ ಇದೇ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.

ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಗಳ ಸಂದರ್ಭದಲ್ಲಿ ಜವಾನರು ಮತ್ತು ಅಧಿಕಾರಿಗಳ ಕಾರ್ಯಕ್ಷಮತೆಯನ್ನು ಉನ್ನತ ಮಟ್ಟದಲ್ಲಿ ಗಮನಕ್ಕೆ ತೆಗೆದುಕೊಳ್ಳಲಾಗುತ್ತದೆ. ನಂತರ ಅವರನ್ನು ಸೂಕ್ಷ್ಮ ಪರಿಶೀಲನೆಗೊಳಪಡಿಸಿದ ನಂತರ ಇಂತಹ ನೇಮಕಾತಿಗಳನ್ನು ಮಾಡಲಾಗುತ್ತದೆ ಎಂದರು.

ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ರಾಜ್ಯ ಪಡೆ ಬದ್ಧವಾಗಿದೆ ಎಂಬುದನ್ನು ಖಚಿತಪಡಿಸಿದ ಅವರು, ಹೆಚ್ಚು ವೃತ್ತಿಪರತೆಯೊಂದಿಗೆ ಉಗ್ರರ ವಿರುದ್ಧ ಹೋರಾಡುವುದಾಗಿ ಹೇಳಿದ್ದಾರೆ.

ತಮ್ಮ ಕಾರ್ಯಾಚರಣೆ ಸಂದರ್ಭದಲ್ಲಿ ಸಾರ್ವಜನಿಕ ಸಂಬಂಧಗಳನ್ನು ಬಲಪಡಿಸಿಕೊಳ್ಳಬೇಕು ಮತ್ತು ದೇಶ ವಿರೋಧಿ ಶಕ್ತಿಗಳ ಚಟುವಟಿಕೆಗಳ ಬಗ್ಗೆ ನಿಕಟ ಗಮನವನ್ನು ಮುಂದುವರಿಸುವುದು ಅಗತ್ಯ ಎಂದು ಜವಾನರು ಮತ್ತು ಅಧಿಕಾರಿಗಳಿಗೆ ಖೋಡಾ ಕರೆ ನೀಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ