ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಅಮೆರಿಕದಿಂದ ಪಾಕ್‌ಗೆ ಆಧುನಿಕ ಶಸ್ತ್ರಾಸ್ತ್ರ: ಭಾರತಕ್ಕೆ ಆತಂಕ! (Pakistan | A K Antony | al-Qaida | Taliban | US)
Bookmark and Share Feedback Print
 
ಭಯೋತ್ಪಾದಕರಿಗೆ ಮಣೆ ಹಾಕುವ ಪಾಕಿಸ್ತಾನ ಇಬ್ಬಗೆಯ ನೀತಿಯನ್ನು ಅನುಸರಿಸುತ್ತಿರುವುದು ಭಾರತಕ್ಕೆ ನುಂಗಲಾರದ ತುಪ್ಪವಾಗಿ ಪರಿಣಮಿಸಿರುವ ನಡುವೆಯೇ, ಪಾಕಿಸ್ತಾನ ಸೇನೆಗೆ ಅಮೆರಿಕ ಅತ್ಯಾಧುನಿಕ ಶಸ್ತ್ರಾಸ್ತ್ರ ಒದಗಿಸಲು ಮುಂದಾಗಿರುವ ಕ್ರಮಕ್ಕೆ ಭಾರತ ಕಳವಳ ವ್ಯಕ್ತಪಡಿಸಿದೆ.

ಅಲ್ ಖಾಯಿದಾ ಮತ್ತು ತಾಲಿಬಾನ್ ಉಗ್ರರ ವಿರುದ್ಧ ಸೆಣಸಲು ಪಾಕ್ ಸೇನೆಯನ್ನು ಬಲಪಡಿಸಬೇಕಾಗಿದೆ ಎಂಬ ಅಮೆರಿಕದ ಸಮಜಾಯಿಷಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಶನಿವಾರ ರಕ್ಷಣಾ ಸಚಿವ ಎ.ಕೆ.ಆಂಟನಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಸ್ಪಷ್ಟಪಡಿಸಿದ್ದಾರೆ.

ಅಮೆರಿಕ ಪಾಕಿಸ್ತಾನಕ್ಕೆ ಅತ್ಯಾಧುನಿಕ ಶಸ್ತ್ರಾಸ್ತ್ರ ಪೂರೈಸಿದರೆ ಪಾಕಿಸ್ತಾನ ಉಗ್ರರನ್ನು ಮಟ್ಟಹಾಕಲು ಬಳಸದೇ ಅದನ್ನು ಭಾರತ ವಿರುದ್ಧ ಬಳಸಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಅಲ್ಲದೇ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿಯೂ ಈ ವಿಷಯವನ್ನು ಗಮನಕ್ಕೆ ತರಲಾಗಿತ್ತು ಎಂದು ಆಂಟನಿ ಹೇಳಿದರು.

ಆ ನಿಟ್ಟಿನಲ್ಲಿ ನಾವು ಅಮೆರಿಕಕ್ಕೆ ಮನವಿ ಮಾಡಿಕೊಳ್ಳುತ್ತಿದ್ದೇವೆ. ಈ ಅತ್ಯಾಧುನಿಕ ಶಸ್ತ್ರಾಸ್ತ್ರವನ್ನು ಭಾರತದ ವಿರುದ್ಧ ಬಳಸದಂತೆ ಅಮೆರಿಕ ಪಾಕಿಸ್ತಾನಕ್ಕೆ ತಾಕೀತು ಮಾಡಬೇಕು. ಶಸ್ತ್ರಾಸ್ತ್ರಗಳನ್ನು ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ಗಡಿಭಾಗದಲ್ಲಿನ ಉಗ್ರರ ವಿರುದ್ಧ ಬಳಸುವಂತೆ ಸೂಚನೆ ನೀಡಬೇಕೆಂದು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ