ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ತಮಿಳುನಾಡು ವರದಿ- ರಾಜೀವ್ ಹಂತಕಿ ನಳಿನಿ ಬಿಡುಗಡೆ? (Madras High Court | Nalini Sreeharan | Rajiv Gandhi | Tamil Nadu)
Bookmark and Share Feedback Print
 
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್‌ಳನ್ನು ಅವಧಿಗೆ ಮುಂಚೆ ಬಿಡುಗಡೆ ಮಾಡುವ ಅರ್ಜಿಯ ಸಂಬಂಧ ಇಂದು ಮದ್ರಾಸ್ ಹೈಕೋರ್ಟ್ ಅಂತಿಮ ನಿರ್ಧಾರಕ್ಕೆ ಬರಲಿದೆ.

ಕಾರಾಗೃಹ ಸಲಹಾ ಸಮಿತಿಯು ಸಿದ್ಧಪಡಿಸಿದ ವರದಿಯನ್ನು ತಮಿಳುನಾಡು ಸರಕಾರ ಇಂದು ನ್ಯಾಯಾಲಯದಲ್ಲಿ ಸಲ್ಲಿಸಲಿದ್ದು, ನ್ಯಾಯಮೂರ್ತಿ ಎಲಿಪ್ ಧರ್ಮರಾವ್ ಮತ್ತು ಕೆ.ಕೆ. ಶಶಿಧರನ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಕುರಿತ ನಿರ್ಧಾರವನ್ನು ತೆಗೆದುಕೊಳ್ಳಲಿದೆ.

ವರದಿಯನ್ನು ಸ್ವೀಕರಿಸಿದ್ದ ರಾಜ್ಯ ಸರಕಾರ, ತನಗೆ ಎರಡು ವಾರಗಳ ಕಾಲಾವಕಾಶ ನೀಡಬೇಕೆಂದು ಸಲ್ಲಿಸಿದ್ದ ಕೋರಿಕೆಯನ್ನು ನ್ಯಾಯಾಲಯ ತಳ್ಳಿ ಹಾಕಿದ್ದು, ಇಂದು ವರದಿಯನ್ನು ಸಲ್ಲಿಸುವಂತೆ ನಿರ್ದೇಶನ ನೀಡಿದೆ.

19 ವರ್ಷಗಳ ಜೈಲು ಶಿಕ್ಷೆ ಅನುಭವಿಸಿರುವ ನಳಿನಿ ಹೈಕೋರ್ಟ್ ಮೊರೆ ಹೋಗಿದ್ದ ಹಿನ್ನೆಲೆಯಲ್ಲಿ ಇದರ ಆದೇಶವನ್ನು ಪಾಲಿಸಿದ್ದ ರಾಜ್ಯ ಸರಕಾರ ವೆಲ್ಲೋರ್ ಜಿಲ್ಲಾಧಿಕಾರಿ ಮುಖ್ಯಸ್ಥರಾಗಿರುವ ಈ ಕಾರಾಗೃಹ ಸಲಹಾ ಸಮಿತಿಯನ್ನು ರಚಿಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು.

ಮೂಲಗಳ ಪ್ರಕಾರ ಸಲಹಾ ಸಮಿತಿಯು ನಳಿನಿಯನ್ನು ಅವಧಿಗಿಂತ ಮುಂಚೆ ಬಿಡುಗಡೆ ಮಾಡುವಂತೆ ಶಿಫಾರಸು ಮಾಡಿದ್ದು, ಈ ಹಿಂದೆ ಬಿಡುಗಡೆಯನ್ನು ವಿರೋಧಿಸಿದ್ದ ರಾಜ್ಯ ಸರಕಾರ ಇದೀಗ ಪರವಾಗಿರುವುದು ಸ್ಪಷ್ಟವಾಗಿದೆ ಎಂದು ಹೇಳಲಾಗಿದೆ.

ಅದೇ ಹೊತ್ತಿಗೆ ಕರುಣಾನಿಧಿ ಸರಕಾರವು ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದು, ಕೇಂದ್ರವನ್ನು ಸಂಪರ್ಕಿಸದೆ ಏಕಾಏಕಿ ನಿರ್ಧಾರವನ್ನು ತಾನು ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದೆ.

ರಾಜೀವ್ ಗಾಂಧಿ ಹತ್ಯೆಯಲ್ಲಿ ಪ್ರಮುಖ ಪಾತ್ರವಹಿಸಿರುವ ಎಲ್‌ಟಿಟಿಇ ನಾಯಕ ಮುರುಗನ್ ಪತ್ನಿ ನಳಿನಿ, ಶ್ರೀಪೆರಂಬೂರಿನಲ್ಲಿ ಹತ್ಯಾಕೋರರ ಜತೆ ಸೇರಿಕೊಂಡಿದ್ದಳು.
ಸಂಬಂಧಿತ ಮಾಹಿತಿ ಹುಡುಕಿ