ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮಹಿಳಾ ಮಸೂದೆ- ಸರ್ವಪಕ್ಷಗಳೊಂದಿಗೆ ಮಾತುಕತೆ; ಸರಕಾರ (All parties meet | Women's Reservation Bill | Lok Sabha | Lalu Prasad)
Bookmark and Share Feedback Print
 
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸುವ ಮೊದಲು ಎಲ್ಲಾ ವಿರೋಧ ಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುತ್ತದೆ ಎಂದು ಕೇಂದ್ರ ಸರಕಾರ ಹೇಳಿದ್ದು, ವಿಧೇಯಕ ಸಂಬಂಧ ಎದ್ದಿರುವ ವಿವಾದಗಳು ತಣ್ಣಗಾಗುವ ಲಕ್ಷಣಗಳು ಗುರುವಾರ ಕಾಣಿಸಿಕೊಂಡಿವೆ.

ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವ ಮೂವರು ಪ್ರಬಲರಾದ ಸಮಾಜವಾದಿ ಪಕ್ಷದ ಮುಲಾಯಂ ಸಿಂಗ್ ಯಾದವ್, ರಾಷ್ಟ್ರೀಯ ಜನತಾದಳದ ಲಾಲೂ ಪ್ರಸಾದ್ ಯಾದವ್ ಮತ್ತು ಸಂಯುಕ್ತ ಜನತಾದಳದ ಶರದ್ ಯಾದವ್ ಅವರು ವಿತ್ತ ಸಚಿವ ಪ್ರಣಬ್ ಮುಖರ್ಜಿಯವರನ್ನು ಭೇಟಿ ಮಾಡಿದ ನಂತರ ಈ ಬೆಳವಣಿಗೆ ಕಂಡು ಬಂದಿದೆ.

ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಡಿಎಂಕೆ ನಾಯಕ ಟಿ.ಆರ್. ಬಾಲು ಕೂಡ ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಗದ್ದಲದ ಪರಿಣಾಮ ಹಲವು ಬಾರಿ ಲೋಕಸಭೆಯ ಕಲಾಪ ಮುಂದೂಡಿದ ನಂತರ ಈ ಮಾತುಕತೆ ನಡೆದಿತ್ತು.

ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸುವ ಮೊದಲು ಸದನದ ಎಲ್ಲರ ವಿಶ್ವಾಸವನ್ನೂ ಪಡೆಯಲಾಗುತ್ತದೆ ಎಂದು ಸರಕಾರ ಭರವಸೆ ನೀಡಿದೆ ಎಂದು ಮಾತುಕತೆಯ ನಂತರ ತೃಪ್ತಿಯೊಂದಿಗೆ ಶರದ್ ಯಾದವ್ ಪ್ರತಿಕ್ರಿಯಿಸಿದ್ದಾರೆ.

ಸರ್ವಪಕ್ಷಗಳ ಸಭೆ ಕರೆಯುವುದರಿಂದ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ. ಹಾಗಾಗಿ ನಾವು ಎಲ್ಲಾ ಪಕ್ಷಗಳ ಜತೆ ಕೂತು ಅಭಿಪ್ರಾಯವನ್ನು ಹಂಚಿಕೊಳ್ಳುವುದರ ಮೂಲಕ ಭಿನ್ನಾಭಿಪ್ರಾಯಗಳನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ. ಎಲ್ಲಾ ಪಕ್ಷಗಳ ಅಭಿಪ್ರಾಯಗಳಿಗೂ ಮುಕ್ತ ಅವಕಾಶವಿದೆ ಎಂಬುದನ್ನು ಪ್ರಧಾನ ಮಂತ್ರಿಯವರು ಕೂಡ ಹೇಳಿದ್ದಾರೆ ಎಂದು ಲೋಕಸಭೆಯ ನಾಯಕರೂ ಆಗಿರುವ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ.

ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರ ಮೀಸಲಾತಿ ನೀಡುವ ವಿಧೇಯಕದ ಸಂಬಂಧ ಲೋಕಸಭೆಯಲ್ಲಿನ ಚರ್ಚೆಯ ಸಂದರ್ಭದಲ್ಲಿ ಅವರು ಉತ್ತರಿಸುತ್ತಿದ್ದರು.

ಈ ಸಂದರ್ಭದಲ್ಲಿ ಅವರು ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಹಾಗೂ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತಿತರರ ಸಹಕಾರಕ್ಕೆ ಪ್ರಣಬ್ ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ