ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮತಾಂತರಗೊಂಡ ದಲಿತರಿಗೂ ಮೀಸಲಾತಿ ಬೇಕು: ಕರುಣಾನಿಧಿ (M Karunanidhi | reservation for Dalits | Muslims | T R Baalu)
Bookmark and Share Feedback Print
 
ಹಿಂದೂ ಧರ್ಮದಿಂದ ಕ್ರೈಸ್ತ ಮತ್ತು ಮುಸ್ಲಿಂ ಧರ್ಮಗಳಿಗೆ ಮತಾಂತರಗೊಂಡಿರುವ ದಲಿತರಿಗೂ ಮೀಸಲಾತಿಯನ್ನು ವಿಸ್ತರಿಸಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿಯವರು ಪ್ರಧಾನ ಮಂತ್ರಿಯವರನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದಿರುವ ಕರುಣಾನಿಧಿ, ಮತಾಂತರಗೊಂಡ ದಲಿತರಿಗೆ ಮೀಸಲಾತಿಯನ್ನು ವಿಸ್ತರಿಸಲು ತಕ್ಷಣವೇ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ ಎಂದು ಡಿಎಂಕೆ ಸಂಸದ ಹಾಗೂ ಪಕ್ಷದ ಮುಖಂಡ ಟಿ.ಆರ್. ಬಾಲು ಲೋಕಸಭೆಯಲ್ಲಿ ತಿಳಿಸಿದ್ದಾರೆ.
PTI

ಶೂನ್ಯವೇಳೆಯಲ್ಲಿ ಇದನ್ನು ಪ್ರಸ್ತಾಪಿಸಿದ ಬಾಲು, ಹಿಂದೂ ಧರ್ಮದ ಜಾತಿ ಪದ್ಧತಿಯ ತಾರತಮ್ಯ ನೀತಿಯಿಂದ ಅನ್ಯಾಯಕ್ಕೊಳಗಾದ ಕಾರಣ ದಲಿತರು ಮತಾಂತರಗೊಂಡಿದ್ದಾರೆ ಎಂದರು.

ಅವರು ಮತ್ತೊಂದು ಧರ್ಮಕ್ಕೆ ಮತಾಂತರಗೊಂಡ ಕೂಡಲೇ ಅವರ ಸಾಮಾಜಿಕ ಸ್ಥಿತಿ ಬದಲಾಗಿಲ್ಲ. ಹಾಗಾಗಿ ಅವರಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ನೀಡುವ ಮೀಸಲಾತಿ ವ್ಯವಸ್ಥೆಯನ್ನು ಒದಗಿಸಬೇಕು ಎಂದು ಬಾಲು ಒತ್ತಾಯಿಸಿದರು.

ಕ್ರೈಸ್ತ ಅಥವಾ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ದಲಿತರಿಗೆ ಮೀಸಲಾತಿ ಪ್ರಯೋಜನ ವಿಸ್ತರಿಸಲು ಅಗತ್ಯ ಬಿದ್ದರೆ ಸರಕಾರವು ಸಂವಿಧಾನಕ್ಕೆ ತಿದ್ದುಪಡಿ ತರಬೇಕು. ಆ ಮೂಲಕ ಮತಾಂತರಗೊಂಡ ದಲಿತರಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಬೇಕು ಎಂದರು.

ಈ ಸಂದರ್ಭದಲ್ಲಿ ಋಗ್ವೇದವನ್ನು ಉಲ್ಲೇಖಿಸಿದ ಡಿಎಂಕೆ ಸದಸ್ಯ, ಹಿಂದೂಗಳಲ್ಲಿನ ಜಾತಿ ಪದ್ಧತಿಯನ್ನು ಚತುರ್ವರ್ಣ ಕಲ್ಪನೆಯಿಂದ ಪಡೆದುಕೊಳ್ಳಲಾಗಿದೆ; ಹಾಗಾಗಿ ಕ್ರಿಶ್ಚಿಯನ್ ಮತ್ತು ಇಸ್ಲಾಂ ಧರ್ಮಗಳಿಗೆ ಮತಾಂತರಗೊಂಡ ದಲಿತರನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಂತೆ ನೋಡಬೇಕು ಎಂದು ಸರಕಾರವನ್ನು ಒತ್ತಾಯಿಸಿದರು.
ಸಂಬಂಧಿತ ಮಾಹಿತಿ ಹುಡುಕಿ