ಗೋದ್ರಾ ಗಲಭೆಯ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಮುಂದೆ ರವಿವಾರದಂದು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಹಾಜಾರಾಗುವುದಿಲ್ಲ ಎಂದು ಸರಕಾರದ ಮೂಲಗಳು ತಿಳಿಸಿವೆ.
ಅಪೆಕ್ಸ್ ನ್ಯಾಯಾಲಯದಿಂದ ನೇಮಕಗೊಂಡ ವಿಶೇಷ ತನಿಖಾ ತಂಡ, ಮುಖ್ಯಮಂತ್ರಿ ನರೇಂದ್ರ ಮೋದಿಯವರಿಗೆ ಸಮನ್ಸ್ ಜಾರಿ ಮಾಡಿ ಕಾಂಗ್ರೆಸ್ ಪಕ್ಷದ ಮಾಜಿ ಸಂಸತ್ ಸದಸ್ಯ ಎಹಸಾನ್ ಜಪ್ರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಜರಾಗುವಂತೆ ಆದೇಶಿಸಿತ್ತು.
ಎಹಸಾನ್ ಜಪ್ರಿ ವಿಧವೆ ಪತ್ನಿ ಝಾಕಿಯಾ ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಇತರ ರಾಜಕಾರಣಿಗಳು, ಪೊಲೀಸ್ ಅಧಿಕಾರಿಗಳು ಸೇರಿದಂತೆ 62 ಮಂದಿಯ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.
ಮುಖ್ಯಮಂತ್ರಿ ಮೋದಿಯವರ ಕಚೇರಿಯ ಅಧಿಕಾರಿಗಳು ಸಮನ್ಸ್ ಸ್ವೀಕರಿಸಿದ ಬಗ್ಗೆ ಮಾಹಿತಿ ನೀಡಿದ್ದು, ಆದರೆ ಇಲ್ಲಿಯವರೆಗೆ ಉತ್ತರಿಸುವ ಗೋಜಿಗೆ ಹೋಗಿಲ್ಲ ಎಂದು ವಿಶೇಷ ತನಿಖಾ ತಂಡದ ಮುಖ್ಯಸ್ಥ ಆರ್.ಕೆ.ರಾಘವನ್ ತಿಳಿಸಿದ್ದಾರೆ.