ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ರಾಜಕಾರಣಿಗಳ ಭ್ರಷ್ಟಚಾರ ತನಿಖೆ ಆದೇಶ ಹಕ್ಕು ನಮಗಿಲ್ಲ:ಸುಪ್ರೀಂ (Mayawati | graft probes | politicians | Supreme Court | BSP)
Bookmark and Share Feedback Print
 
ರಾಜಕಾರಣಿಗಳ ಭ್ರಷ್ಟಾಚಾರ ಪ್ರಕರಣದ ತನಿಖೆಗೆ ಆದೇಶಿಸುವ ಅಧಿಕಾರ ಸುಪ್ರೀಂಕೋರ್ಟ್‌ಗೆ ಇಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಕೆ.ಜಿ.ಬಾಲಕೃಷ್ಣನ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ತೀರ್ಪು ನೀಡಿದೆ.

ಸಿಕ್ಕಿಂ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರ ಮೇಲಿನ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಪೀಠ, ಈ ಪ್ರಕರಣವನ್ನು ಸಿಬಿಐಗೆ ವಹಿಸಲು ನಿರಾಕರಿಸಿತು.

ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ರಾಜಕಾರಣಿಗಳ ವಿರುದ್ಧ ತನಿಖೆಗೆ ಆದೇಶಿಸುವ ಹಕ್ಕು ನಮಗಿಲ್ಲ(ಸುಪ್ರೀಂಕೋರ್ಟ್) ಎಂದು ಮುಖ್ಯ ನ್ಯಾಯಮೂರ್ತಿ ಕೆ.ಜಿ.ಬಾಲಕೃಷ್ಣನ್ , ನ್ಯಾ.ಪಿ.ಸದಾಶಿವಂ ಮತ್ತು ಜೆ.ಎಂ.ಪಾಂಚಾಲ್ ಅವರಿದ್ದ ಪೀಠ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಾರಸಗಟಾಗಿ ತಳ್ಳಿಹಾಕಿದೆ.

ಈ ಸಂಬಂಧ ಅರ್ಜಿ ಸಲ್ಲಿಸಿದ್ದ ವಿಪಕ್ಷ ನಾಯಕ ಕುಂಗುಮಿಯಾ ಲೆಪ್ಚಾ ಅವರಿಗೆ ಆದೇಶ ನೀಡಿದ ಪೀಠ, ಅವರ ಅಕ್ರಮದ ಬಗ್ಗೆ ಸಂದೇಹವಿದ್ದರೆ ನೇರವಾಗಿ ತನಿಖಾ ಸಂಸ್ಥೆಯನ್ನೇ ಸಂಪರ್ಕಿಸುವಂತೆ ಸೂಚಿಸಿದೆ.

ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಏನಿದ್ದರೂ ರಾಜ್ಯ ಪೊಲೀಸ್, ಸಿಬಿಐ ಹಾಗೂ ಕೇಂದ್ರ ಜಾಗೃತ ದಳಗಳಿಗೆ ಮಾತ್ರ ತನಿಖೆಗೆ ಆದೇಶಿಸುವ ಹಕ್ಕಿದೆ.

ಅಲ್ಲದೇ ಸುಮಾರು 200ಕೋಟಿ ರೂಪಾಯಿ ವೆಚ್ಚದಲ್ಲಿ ಬಿಎಸ್‌ಪಿ ಪಕ್ಷದ 25ನೇ ವರ್ಷದ ಸಂಭ್ರಮಾಚರಣೆಯ ಮಹಾ ಸಮ್ಮೇಳನ ಹಾಗೂ ನೋಟಿನ ಹಾರಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ವಿರುದ್ಧ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್) ಅಲಹಾಬಾದ್‌ ಹೈಕೋರ್ಟ್‌ನ ಲಕ್ನೋ ಪೀಠ ಇತ್ತೀಚೆಗಷ್ಟೇ ವಜಾಗೊಳಿಸಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ