ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಕಾಂಗ್ರೆಸ್, ಬಿಜೆಪಿ ಅಂಬೇಡ್ಕರ್ ವಿರೋಧಿಗಳು: ಮಾಯಾವತಿ (Ambedkar | Uttar Pradesh | Mayawati | Women's Reservation Bill | Congress | BJP)
ಕಾಂಗ್ರೆಸ್, ಭಾರತೀಯ ಜನತಾ ಪಕ್ಷ ಹಾಗೂ ಸಮಾಜವಾದಿ ಪಕ್ಷಗಳು ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ವಿರೋಧಿಗಳಾಗಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಶನಿವಾರ ಗಂಭೀರವಾಗಿ ಆರೋಪಿಸಿದ್ದಾರೆ.
ಮಹಿಳಾ ಮೀಸಲಾತಿ ಮಸೂದೆ ಜಾರಿ ನಿರ್ಧಾರ ಕುರಿತಂತೆ ಮತ್ತೆ ವಾಗ್ದಾಳಿ ನಡೆಸಿರುವ ಅವರು, ಮಹಿಳಾ ಮೀಸಲಾತಿ ಮಸೂದೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಹಾಗೂ ಮೇಲ್ವರ್ಗದ ಬಡ ಮಹಿಳೆಯರಿಗೆ ಯಾವುದೇ ರೀತಿಯ ಪ್ರಯೋಜನವಿಲ್ಲ ಎಂದು ಆರೋಪಿಸಿದ್ದಾರೆ.
ಬಿಎಸ್ಪಿ ಪಕ್ಷದ ಸಭೆಯಲ್ಲಿ ಮಾತನಾಡಿದ ಮಾಯಾವತಿ, ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ನೀತಿ ಮತ್ತು ನಡವಳಿಕೆಗಳನ್ನು ಗಮನಿಸಿದರೆ ಇವರೆಲ್ಲಾ ಯಾವಾಗಲೂ ಅಂಬೇಡ್ಕರ್ ವಿರೋಧಿಗಳಂತೆ ವರ್ತಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತಿದೆ ಎಂದರು.
ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಗೌರವಾರ್ಥವಾಗಿ ಬೃಹತ್ ಸೌಧ, ಪಾರ್ಕ್, ಯೂನಿರ್ವಸಿಟಿಗಳನ್ನು ನಿರ್ಮಿಸಲು ಮುಂದಾದ ಸಂದರ್ಭದಲ್ಲಿಯೇ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಇನ್ನುಳಿದ ವಿರೋಧ ಪಕ್ಷಗಳು ಅನಾವಶ್ಯಕ ವಿವಾದ ಹುಟ್ಟುಹಾಕಲು ಪ್ರಾರಂಭಿಸಿರುವುದಾಗಿ ಹೇಳಿದರು.