ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮಹಾರಾಷ್ಟ್ರದಲ್ಲಿ ಯಡಿಯೂರಪ್ಪ; ಶಿವಸೇನೆಯಿಂದ ಪ್ರತಿಭಟನೆ (Shiv Sene | BS Yediyurappa | Maharashtra | Karnataka)
Bookmark and Share Feedback Print
 
ಕರ್ನಾಟಕಕ್ಕೆ ಬಂಡವಾಳ ಆಕರ್ಷಿಸುವ ಸಂಬಂಧ ಹೂಡಿಕೆದಾರರ ಸಮಾವೇಶಕ್ಕಾಗಿ ಸಂಪುಟ ಸಚಿವರೊಂದಿಗೆ ಮುಂಬೈಗೆ ತೆರಳಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಶಿವಸೇನೆ ಭಾರೀ ಪ್ರತಿಭಟನೆ ನಡೆಸಿದ್ದು, ಪ್ರತಿಕೃತಿ ದಹಿಸಿದೆ.

ಮುಂಬೈಯಲ್ಲಿನ ಹೂಡಿಕೆದಾರರ ಸಮಾವೇಶ ನಡೆಯುತ್ತಿರುವ ಹೊಟೇಲ್ ಹೊರಗಡೆ ಗುಂಪು ಸೇರಿದ ನೂರಾರು ಶಿವಸೇನೆ ಕಾರ್ಯಕರ್ತರು ಕರ್ನಾಟಕ ಮತ್ತು ಯಡಿಯೂರಪ್ಪ ಅವರ ವಿರುದ್ಧ ಘೋಷಣೆ ಕೂಗುತ್ತಾ ತನ್ನ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಮುಖ್ಯಮಂತ್ರಿಯವರ ಪ್ರತಿಕೃತಿಯನ್ನು ದಹಿಸಿದೆ ಎಂದು ವರದಿಗಳು ಹೇಳಿವೆ.
PTI

ಈ ಸಮಾವೇಶಕ್ಕಾಗಿ ಮುಖ್ಯಮಂತ್ರಿಯವರ ಜತೆ ಕೈಗಾರಿಕಾ ಸಚಿವ ಮುರುಗೇಶ ನಿರಾಣಿಯವರು ಕೂಡ ತೆರಳಿದ್ದು, ರಾಜ್ಯಕ್ಕೆ ಬಂಡವಾಳವನ್ನು ಆಕರ್ಷಿಸುವ ಸಂಬಂಧ ಹಲವು ಉದ್ಯಮಿಗಳ ಜತೆ ಚರ್ಚೆ ನಡೆಸಿದ್ದಾರೆ.

ಈ ಹೊತ್ತಿಗೆ ಹೊಟೇಲಿನ ಹೊರಗಡೆ ಶಿವಸೇನೆ ಪ್ರತಿಭಟನೆ ನಡೆಸಿತು. ಬೆಳಗಾವಿ ಮಹಾನಗರ ಪಾಲಿಕೆಗೆ ಕನ್ನಡಿಗ ಮೇಯರ್ ಆಯ್ಕೆಯಾಗಿರುವುದನ್ನು ವಿರೋಧಿಸಿರುವ ಪ್ರತಿಭಟನಾಕಾರರು, ಎಂಇಎಸ್ ನಾಮಪತ್ರ ತಿರಸ್ಕೃತವಾಗಿರುವುದರ ಹಿಂದೆ ಪಿತೂರಿ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.

ಈ ನಡುವೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ರಾಜ್ಯ ಸರಕಾರದ ಅಭಿವೃದ್ದಿ ಕಾರ್ಯಗಳನ್ನು ಉದ್ಯಮಿಗಳು ಮೆಚ್ಚಿದ್ದಾರೆ. ಅವರು ನಮ್ಮ ನಿರೀಕ್ಷೆಗೂ ಮೀರಿ ಬೆಂಗಳೂರಿಗೆ ಬರಲು ಸಿದ್ಧರಾಗಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕೈಗಾರಿಕಾ ಕ್ರಾಂತಿ ನಡೆಯಲಿದೆ ಎಂದಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ