ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಕಳಂಕಿತ ನ್ಯಾ. ದಿನಕರನ್‌ಗೆ ರಜೆ; ಕರ್ನಾಟಕಕ್ಕೆ ನೂತನ ಸಿಜೆ (K.G. Balakrishnan | Karnataka High Court CJ | P.D. Dinakaran | Madan B. Lokur)
Bookmark and Share Feedback Print
 
ಅಕ್ರಮ ಆಸ್ತಿ ಸಂಬಂಧ ಮಹಾಭಿಯೋಗ ಪ್ರಕ್ರಿಯೆ ಎದುರಿಸುತ್ತಿರುವ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪಿ.ಡಿ. ದಿನಕರನ್ ಅವರನ್ನು ರಜೆಯ ಮೇಲೆ ತೆರಳಲು ಸರ್ವೋಚ್ಚ ನ್ಯಾಯಾಲಯ ಸಲಹೆ ನೀಡಿದ್ದು, ಅವರ ಸ್ಥಾನಕ್ಕೆ ನ್ಯಾಯಮೂರ್ತಿ ಮದನ್ ಬಿ. ಲೋಕೂರ್ ಅವರನ್ನು ನಿಯೋಜಿಸಲಾಗಿದೆ.

ಕಳೆದ ಡಿಸೆಂಬರ್ ನಂತರ ನ್ಯಾಯಾಂಗ ಪ್ರಕ್ರಿಯೆಯಿಂದ ಸ್ವಇಚ್ಛೆಯಿಂದ ದೂರ ಉಳಿದಿರುವ ದಿನಕರನ್ ಅವರು ರಜೆಯ ಮೇಲೆ ತೆರಳಬೇಕೆಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಉನ್ನತ ಮಟ್ಟದ ಸಮಿತಿ ನಿರ್ಧರಿಸಿದ ನಂತರ ಸೂಚನೆ ರವಾನಿಸಿದೆ. ಹೈಕೋರ್ಟ್‌ನಲ್ಲಿ ನ್ಯಾಯದಾನ ಪ್ರಕ್ರಿಯೆಗೆ ದಿನಕರನ್ ಗೈರು ಹಾಜರಿಯಿಂದ ತೊಂದರೆಯಾಗಿದೆ ಎಂಬ ಕಳವಳಗಳ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಮೂಲಗಳು ಹೇಳಿವೆ.
PR


ಕರ್ನಾಟಕದಲ್ಲಿ ತೆರವಾಗುವ ಮುಖ್ಯ ನ್ಯಾಯಮೂರ್ತಿಗಳ ಸ್ಥಾನಕ್ಕೆ ದೆಹಲಿ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮದನ್ ಬಿ. ಲೋಕೂರ್ ಅವರನ್ನು ನೇಮಕ ಮಾಡಲಾಗಿದೆ. ದಿನಕರನ್ ಅವರು ರಜೆಯಲ್ಲಿ ತೆರಳುವುದು ಅಧಿಕೃತಗೊಂಡ ನಂತರ ನ್ಯಾಯಮೂರ್ತಿ ಮದನ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಭ್ರಷ್ಟಾಚಾರ, ಅಕ್ರಮ ಆಸ್ತಿ ಗಳಿಕೆ ಮತ್ತು ನ್ಯಾಯಾಂಗ ಕಚೇರಿಯ ದುರ್ಬಳಕೆ ಆರೋಪಗಳನ್ನು ಎದುರಿಸುತ್ತಿರುವ ದಿನಕರನ್ ವಿರುದ್ಧ ಮಹಾಭಿಯೋಗಕ್ಕಾಗಿ ರಾಜ್ಯಸಭೆಯಲ್ಲಿ ಗೊತ್ತುವಳಿ ಮಂಡಿಸಿದ ಬಳಿಕ ಮುಖ್ಯ ನ್ಯಾಯಮೂರ್ತಿ ಪ್ರಕರಣಗಳನ್ನು ವಿಚಾರಣೆ ನಡೆಸುತ್ತಿರಲಿಲ್ಲ.

2009ರ ಆಗಸ್ಟ್‌ನಲ್ಲಿ ದಿನಕರನ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಮಾಡಲು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಉನ್ನತ ಸಮಿತಿಯು ಶಿಫಾರಸು ಮಾಡಿತ್ತು. ನಂತರ ಕೇಳಿ ಬಂದ ಆರೋಪಗಳ ಹಿನ್ನೆಲೆಯಲ್ಲಿ ಈ ಶಿಫಾರಸನ್ನು ಸುಪ್ರೀಂ ಕೋರ್ಟ್ ಹಿಂದಕ್ಕೆ ಪಡೆದುಕೊಂಡಿತ್ತು.
ಸಂಬಂಧಿತ ಮಾಹಿತಿ ಹುಡುಕಿ