ಪ್ರಕಾಶ್ ಅರ್ಜಿ ತಿರಸ್ಕಾರ
ಭೂ ಹಗರಣಕ್ಕೆ ಸಂಬಂಧಪಟ್ಟಂತೆ ತನ್ನ ಮೇಲೆ ವಿಚಾರಣಾ ಆದೇಶ ನೀಡಿರುವುದನ್ನು ಪ್ರಶ್ನಿಸಿದ್ದ ನಿವೃತ್ತ ಲೆಫ್ಟಿನೆಂಟ್ ಜನರಲ್ ಅವಧೇಶ್ ಪ್ರಕಾಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದರಿಂದಾಗಿ ಮತ್ತಷ್ಟು ಸಮಸ್ಯೆಗಳು ಎದುರಾಗಬಹುದು ಎಂದು ನ್ಯಾಯಾಲಯದ ಇದೇ ಸಂದರ್ಭದಲ್ಲಿ ತಿಳಿಸಿದೆ.