ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಅಣುಸಮ್ಮೇಳನ: ಪ್ರಧಾನಿ ಸಿಂಗ್, ಗಿಲಾನಿ ಮಧ್ಯೆ ಮಾತುಕತೆಯಿಲ್ಲ (Manmohan Singh | Yousuf Raza Gilani | Nuclear Security Summit | Barack Obama)
Bookmark and Share Feedback Print
 
ಅಣು ಸಮ್ಮೇಳನದಲ್ಲಿ ಭಾಗವಹಿಸಿರುವ ಭಾರತದ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಪಾಕಿಸ್ತಾನದ ಪ್ರಧಾನಿ ಯುಸೂಫ್ ರಜಾ ಗಿಲಾನಿ, ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆಗಳಿಲ್ಲ ಎಂದು ಪ್ರಧಾನಿ ಕಚೇರಿ ಮೂಲಗಳು ತಿಳಿಸಿವೆ.

ಎರಡು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ, ಪ್ರಧಾನಿ ಸಿಂಗ್ ಹಾಗೂ ಪಾಕ್ ಪ್ರಧಾನಿ ಗಿಲಾನಿಯವರ ಮಧ್ಯೆ ದ್ವಿಪಕ್ಷೀಯ ಮಾತುಕತೆಗೆ ಸಮಯ ನಿಗದಿಪಡಿಸಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಣು ಸಮ್ಮೇಳನದಲ್ಲಿ ಉಭಯ ದೇಶಗಳ ನಾಯಕರು ಪರಸ್ಪರ ಚರ್ಚಿಸಲಿದ್ದಾರೆ ಎನ್ನುವ ಮಾಧ್ಯಮಗಳ ವರದಿಗಳನ್ನು ಪಾಕಿಸ್ತಾನದ ಅಧಿಕಾರಿಗಳು ತಳ್ಳಿಹಾಕಿದ್ದಾರೆ.

ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರರಾದ ಅಬ್ದುಲ್ ಬಾಸಿತ್ ಮಾತನಾಡಿ, ಅಮೆರಿಕದ ರಾಷ್ಟ್ರಾಧ್ಯಕ್ಷ ಬರಾಕ್ ಒಬಾಮಾ ಆತಿಥ್ಯವಹಿಸಿರುವ ಅಣುಸಮ್ಮೇಳನದಲ್ಲಿ, ಉಭಯ ರಾಷ್ಟ್ರಗಳ ನಾಯಕರು ಭಾಗವಹಿಸಿದ್ದರೂ ಮಾತುಕತೆ ನಡೆಸುವ ಸಾಧ್ಯತೆಗಳಿಲ್ಲ ಎಂದು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ