ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಗುಜರಾತ್ ಗಲಭೆ; ಮೋದಿ ಆಯ್ತು, ಈಗ ತೊಗಾಡಿಯಾಗೆ ಸಮನ್ಸ್ (Gujarat riots | SIT | Vishwa Hindu Parishad | Praveen Togadia)
Bookmark and Share Feedback Print
 
ಗೋದ್ರೋತ್ತರ ಹಿಂಸಾಚಾರ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಇತ್ತೀಚೆಗಷ್ಟೇ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರನ್ನು ವಿಚಾರಣೆಗೊಳಪಡಿಸಿದ್ದ ವಿಶೇಷ ತನಿಖಾ ತಂಡವು ಇದೀಗ ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ತೊಗಾಡಿಯಾ ಅವರಿಗೆ ಸಮನ್ಸ್ ಜಾರಿಗೊಳಿಸಿದೆ.

ನಮ್ಮ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತೊಗಾಡಿಯಾ ಅವರು ಏಪ್ರಿಲ್ 19ರಂದು ಸುಪ್ರೀಂ ಕೋರ್ಟ್ ನೇಮಿಸಿರುವ ವಿಶೇಷ ತನಿಖಾ ತಂಡ‌ (ಸಿಟ್)ದೆದುರು ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ ಎಂದು ಇದನ್ನು ವಿಎಚ್‌ಪಿ ಮೂಲಗಳು ಖಚಿತಪಡಿಸಿವೆ.

2002ರ ಫೆಬ್ರವರಿ 28ರಂದು ಗುಲ್ಬರ್ಗ್ ಸೊಸೈಟಿ ಹಿಂಸಾಚಾರದಲ್ಲಿ ಸಾವನ್ನಪ್ಪಿದ್ದ 69 ಮಂದಿಯಲ್ಲಿ ಮಾಜಿ ಸಂಸದ ಎಹ್ಸಾನ್ ಜಾಫ್ರಿ ಕೂಡ ಸೇರಿದ್ದರು. ಈ ಸಂಬಂಧ ಅವರ ಪತ್ನಿ ಝಾಕಿಯಾ ಜಾಫ್ರಿ ದೂರು ನೀಡಿರುವ ಹಿನ್ನೆಲೆಯಲ್ಲಿ ತೊಗಾಡಿಯಾ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ ಎಂದು ಸಿಟ್ ಮೂಲಗಳು ತಿಳಿಸಿವೆ.

ಗಲಭೆಯ ಪಿತೂರಿ ನಡೆಸಿದ ಇತರ ಆರೋಪಿಗಳಿಗೆ ತೊಗಾಡಿಯಾ ಸಹಕರಿಸಿದ್ದಾರೆ ಎಂದು ಜಾಫ್ರಿ ತನ್ನ ದೂರಿನಲ್ಲಿ ಹೇಳಿದ್ದಾರೆ.

ಇದೇ ಪ್ರಕರಣದ ಸಂಬಂಧ ಜಾಫ್ರಿ ನೀಡಿದ್ದ ದೂರಿನನ್ವಯ ನರೇಂದ್ರ ಮೋದಿಯವರನ್ನು ಸಿಟ್ ತಂಡವು ಮಾರ್ಚ್ 27ರಂದು ಸತತ ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.

ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು, ಪೊಲೀಸ್ ಅಧಿಕಾರಿಗಳು, ಹಿರಿಯ ಅಧಿಕಾರಿಗಳು, ಸಹಚರರು ಸೇರಿದಂತೆ 62 ಮಂದಿ ರಾಜ್ಯದಲ್ಲಿನ ಗೋದ್ರೋತ್ತರ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದರು ಎಂದು ಜಾಫ್ರಿ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.

ಜಾಫ್ರಿಯವರ ದೂರಿನ ಸಂಬಂಧ ತನಿಖೆ ನಡೆಸುವಂತೆ ಸಿಟ್‌ಗೆ 2009ರ ಏಪ್ರಿಲ್ 27ರಂದು ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. 2007ರ ನವೆಂಬರ್ 3ರಂದು ಯಾವುದೇ ನಿರ್ದೇಶನ ನೀಡಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್, ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪರಿಹಾರ ಕೇಳುವಂತೆ ಜಾಫ್ರಿಗೆ ಸೂಚನೆ ನೀಡಿದ ನಂತರ ಅವರು ಸುಪ್ರೀಂ ಮೊರೆ ಹೋಗಿದ್ದರು.
ಸಂಬಂಧಿತ ಮಾಹಿತಿ ಹುಡುಕಿ