ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಸಂಸತ್ತಿಗೆ ಅಗೌರವ; ಪ್ರಧಾನಿ ವಿರುದ್ಧ ಬಿಜೆಪಿಯಿಂದ ಹಕ್ಕುಚ್ಯುತಿ (Manmohan Singh | Parliament | phone tapping | Sushma Swaraj)
Bookmark and Share Feedback Print
 
ದೂರವಾಣಿ ಕದ್ದಾಲಿಕೆ ಪ್ರಕರಣ ಮತ್ತು ಐಪಿಎಲ್ ಹಗರಣಗಳಿಗೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿ ರಚಿಸುವಂತೆ ವಿರೋಧ ಪಕ್ಷಗಳು ಸಲ್ಲಿಸಿರುವ ಬೇಡಿಕೆಯನ್ನು ಸಂಸತ್‌ನಿಂದ ಹೊರಗಡೆ ತಳ್ಳಿ ಹಾಕಿದ ಹೇಳಿಕೆ ನೀಡಿರುವ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರ ವಿರುದ್ಧ ಬಿಜೆಪಿ ಲೋಕಸಭೆಯಲ್ಲಿ ಹಕ್ಕುಚ್ಯುತಿ ನಿರ್ಣಯ ಮಂಡಿಸಿದೆ.

ಈ ಸಂಬಂಧ ಲೋಕಸಭಾ ಪ್ರಧಾನ ಕಾರ್ಯದರ್ಶಿ ಪಿ.ಡಿ.ಟಿ. ಅಚಾರಿಯವರಿಗೆ ಬಿಜೆಪಿಯ 50ಕ್ಕೂ ಹೆಚ್ಚು ಸಂಸದರು ಹಕ್ಕುಚ್ಯುತಿ ನಿರ್ಣಯ ಮಂಡಿಸಿದ್ದಾರೆ.

ಲೋಕಸಭೆಯ ಹೊರಗಡೆ ಪ್ರತಿಪಕ್ಷದ ಬೇಡಿಕೆಯನ್ನು ಪ್ರಧಾನಿ ತಳ್ಳಿ ಹಾಕಿದ ನಂತರ ಪ್ರತಿಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ವಿರೋಧದ ಹಿನ್ನೆಲೆಯಲ್ಲಿ ಸಂಸದರು ಈ ಕ್ರಮಕ್ಕೆ ಮುಂದಾಗಿದ್ದಾರೆ.

ಇದು ಸಂಸತ್ತಿಗೆ ತೋರಿಸಿರುವ ಅಗೌರವ. ಈ ಸಂಬಂಧ ಅವರ ಸ್ಪಷ್ಟನೆಯನ್ನು ಸಂಸತ್‌ನಲ್ಲೇ ನೀಡಬೇಕು ಎಂದು ಪ್ರತಿಪಕ್ಷದ ನಾಯಕಿ ಲೋಕಸಭೆಯಲ್ಲಿ ತಿಳಿಸಿದ್ದಾರೆ.

ಸಂಪುಟ ಸಚಿವರದ್ದೇ ದೂರವಾಣಿ ಕದ್ದಾಲಿಕೆ ಮಾಡುವಂತಹ ಪ್ರಸಂಗಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ. ಐಪಿಎಲ್ ವಿವಾದಕ್ಕೆ ಸಂಬಂಧಿಸಿದಂತೆ ಕೂಡ ಜಂಟಿ ಸಂಸದೀಯ ಸಮಿತಿ ರಚಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಬೆಲೆಯೇರಿಕೆಗೆ ಸಂಬಂಧಿಸಿದಂತೆ ಸಂಸತ್‌ನಲ್ಲಿ ಪ್ರತಿಪಕ್ಷಗಳು ಇಂದು ಭಾರೀ ಗದ್ದಲವೆಬ್ಬಿಸಿದವು. ರಾಜ್ಯಸಭೆಯನ್ನು ನಾಳೆ ತನಕ ಮುಂದೂಡಿದರೆ ಲೋಕಸಭೆಯನ್ನು ದಿನದಲ್ಲಿ ಎರಡು ಬಾರಿ ಮುಂದೂಡಲಾಯಿತು.

ಬೆಲೆಯೇರಿಕೆ ವಿರೋಧಿಸಿ ಎಡಪಕ್ಷಗಳು ಸೇರಿದಂತೆ 13 ಪಕ್ಷಗಳು ಇಂದು ರಾಷ್ಟ್ರವ್ಯಾಪಿ 'ಭಾರತ್ ಬಂದ್'ಗೆ ಕರೆ ನೀಡಿದ್ದವು.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ 'ವೆಬ್‌ದುನಿಯಾ'ವನ್ನು ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸಂಬಂಧಿತ ಮಾಹಿತಿ ಹುಡುಕಿ