ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ವಿವಾಹಪೂರ್ವ ಸೆಕ್ಸ್; ಖುಷ್ಬೂ ವಿರುದ್ಧದ 22 ಕೇಸೂ ವಜಾ (virginity | south-Indian film actress | Khusboo | pre-marital sex)
Bookmark and Share Feedback Print
 
ವಿವಾಹಪೂರ್ವ ಲೈಂಗಿಕತೆ ಮತ್ತು ಕನ್ಯತ್ವ ಕುರಿತು ದಕ್ಷಿಣ ಭಾರತದ ಜನಪ್ರಿಯ ನಟಿ ಖುಷ್ಬೂ ಐದು ವರ್ಷಗಳ ಹಿಂದೆ ನೀಡಿದ್ದ ವಿವಾದಿತ ಹೇಳಿಕೆ ಸಂಬಂಧ ಹಲವು ನ್ಯಾಯಾಲಯಗಳಲ್ಲಿ ದಾಖಲಾಗಿದ್ದ ಎಲ್ಲಾ 22 ಪ್ರಕರಣಗಳನ್ನು ಸರ್ವೋಚ್ಚ ನ್ಯಾಯಾಲಯ ಇಂದು ವಜಾಗೊಳಿಸಿದೆ.

ಇದರೊಂದಿಗೆ ಕಳೆದ ಹಲವು ವರ್ಷಗಳಿಂದ ನ್ಯಾಯಾಂಗ ಹೋರಾಟ ನಡೆಸುತ್ತಿದ್ದ ಖುಷ್ಬೂ ನಿರಾಳತೆ ಅನುಭವಿಸಿದ್ದಾರೆ. ತನ್ನ ವಿರುದ್ಧದ ಪ್ರಕರಣಗಳ ಸಂಬಂಧ ಸಲ್ಲಿಸಿದ್ದ ಮೇಲ್ಮನವಿಯನ್ನು ಮದ್ರಾಸ್ ಹೈಕೋರ್ಟ್‌ ತಳ್ಳಿ ಹಾಕಿದ ನಂತರ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
MOKSHA

2005ರಲ್ಲಿ ತಮಿಳು ಪತ್ರಿಕೆಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಖುಷ್ಬೂ, ಮದುವೆಗಿಂತ ಮುಂಚೆ ಲೈಂಗಿಕ ಚಟುವಟಿಕೆ ನಡೆಸುವುದು ತಪ್ಪಲ್ಲ, ಆದರೆ ಅದಕ್ಕೆ ಬೇಕಾದ ಮುನ್ನೆಚ್ಚೆರಿಕೆಗಳನ್ನು ತೆಗೆದುಕೊಳ್ಳಬೇಕು. ವಿದ್ಯಾವಂತ ಪುರುಷನೊಬ್ಬ ತನ್ನ ಹೆಂಡತಿ ಕನ್ಯೆಯಾಗಿರಬೇಕು ಎಂದು ನಿರೀಕ್ಷಿಸುವುದು ಕೂಡ ಸರಿಯಲ್ಲ ಎಂದು ಅವರು ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಆದರೆ ಇದಕ್ಕೆ ತಮಿಳುನಾಡು ಸೇರಿದಂತೆ ದೇಶದ ವಿವಿಧೆಡೆ ಭಾರೀ ಪ್ರತಿಭಟನೆಗಳೂ ನಡೆದಿದ್ದವು. ಒಂದು ಕಾಲದಲ್ಲಿ ಅಭಿಮಾನಿಗಳ ಹೃದಯದಲ್ಲಿ ಮನೆ ಮಾಡಿದ್ದ ಈ ನಟಿಗೆ ಕಟ್ಟಲಾಗಿದ್ದ ದೇವಸ್ಥಾನವನ್ನು ಕೂಡ ಇದೇ ಸಂದರ್ಭದಲ್ಲಿ ಧ್ವಂಸ ಮಾಡಿ ಆಕ್ರೋಶ ವ್ಯಕ್ತಪಡಿಸಲಾಯಿತು. ಬೆನ್ನಿಗೆ ದೇಶದಾದ್ಯಂತ 22ಕ್ಕೂ ಹೆಚ್ಚು ಪ್ರಕರಣಗಳು ನಟಿಯ ವಿರುದ್ಧ ದಾಖಲಾಗಿದ್ದವು. ಈ ಎಲ್ಲಾ ಪ್ರಕರಣಗಳನ್ನೂ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ನನ್ನ ಮಾತುಗಳಲ್ಲಿ ನಂಬಿಕೆಯಿತ್ತು...
ಸರ್ವೋಚ್ಚ ನ್ಯಾಯಾಲಯ ತನ್ನ ಪರವಾಗಿ ತೀರ್ಪು ನೀಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಖುಷ್ಬೂ, ನಾನು ಏನು ಮಾತನಾಡಿದ್ದೆ ಎಂಬುದನ್ನು ಸಮರ್ಥಿಸಿಕೊಳ್ಳುವುದು ಒಬ್ಬ ಮಹಿಳೆಯಾಗಿ ನನಗೆ ಅಷ್ಟು ಸುಲಭವಾಗಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ.

ಪ್ರತಿಯೊಬ್ಬ ಸೆಲೆಬ್ರಿಟಿಯನ್ನು ಒಂದಲ್ಲ ಒಂದು ಕಾರಣವಲ್ಲದ ಕಾರಣಗಳಿಗಾಗಿ ಬೆಟ್ಟು ಮಾಡಿ ತೋರಿಸಲಾಗುತ್ತಿರುವುದನ್ನು ನೋಡಬಹುದು. ಇದೊಂದು ರೀತಿಯಲ್ಲಿ ಶುದ್ಧ ಹಿಂಸೆ. ನಾನೇನು ಮಾತನಾಡಿದ್ದೆ ಎಂಬುದರ ಅರಿವು ನನಗಿದೆ. ನಾನು ಏನು ಹೇಳಿದ್ದೆ ಅದರ ಮೇಲೆ ನನಗೆ ಸಂಪೂರ್ಣ ನಂಬಿಕೆಯಿದೆ ಎಂದು ಮಹಿಳೆಯೊಬ್ಬಳು ತನ್ನ ಮಾತನ್ನು ಸಮರ್ಥಿಸಿಕೊಳ್ಳುವುದು ಸುಲಭದ ಮಾತಲ್ಲ. ಆದರೆ ನಾನು ನನ್ನ ಮಾತಿನ ಮೇಲೆ ನಂಬಿಕೆಯಿಟ್ಟಿದ್ದೇನೆ. ಅದನ್ನು ಈಗ ನ್ಯಾಯಾಲಯ ಸ್ಥಿರೀಕರಿಸಿದೆ ಎಂದು ಅವರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ