ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್: ಐಪಿಎಸ್ ಅಧಿಕಾರಿ ಸೆರೆ (Sohrabuddin | fake encounter case | IPS officer | Gujarat)
Bookmark and Share Feedback Print
 
ತೀವ್ರ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದ ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ವಿಭಾಗದ ಡಿಸಿಪಿಯನ್ನು ಬುಧವಾರ ಅಹಮದಾಬಾದ್‌ನಲ್ಲಿ ವಶಕ್ಕೆ ತೆಗೆದುಕೊಂಡಿದ್ದು, ಪ್ರಕರಣದ ಕುರಿತು ಬಂಧಿತರಾಗಿರುವ 4ನೇ ಐಪಿಎಸ್ ಅಧಿಕಾರಿ ಇವರಾಗಿದ್ದಾರೆ.

ಎನ್‌ಕೌಂಟರ್ ನಡೆದ ವೇಳೆ ವಲ್ಸದ್ ಎಸ್‌ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಐಪಿಎಸ್ ಅಧಿಕಾರಿ ಅಭಯ್ ಚುಡಸಾಮ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಸುಪ್ರೀಂಕೋರ್ಟ್ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿದ ನಂತರ ಸಿಬಿಐ ಈ ಅಧಿಕಾರಿಯನ್ನು ಸೆರೆಹಿಡಿದಿರುವುದಾಗಿ ಸಿಬಿಐ ಡಿಐಜಿ ಪಿ.ಕಂದಸ್ವಾಮಿ ತಿಳಿಸಿದ್ದಾರೆ.

ಎನ್‌ಕೌಂಟರ್ ವೇಳೆ ಶಸ್ತ್ರಾಸ್ತ್ರ ಪೂರೈಸಿದ ಆರೋಪದ ಮೇಲೆ ಅಧಿಕಾರಿಯನ್ನು ವಶಕ್ಕೆ ತೆಗೆದುಕೊಂಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಐಪಿಎಸ್ ಅಧಿಕಾರಿ ಸೇರಿದಂತೆ ಒಟ್ಟು 14 ಪೊಲೀಸರನ್ನು ಬಂಧಿಸಿದ್ದು, ಅವರ ವಿರುದ್ಧ ಕೋರ್ಟ್‌ನಲ್ಲಿ ಆರೋಪ ಪಟ್ಟಿಯನ್ನು ಸಿಐಡಿ ಸಲ್ಲಿಸಿತ್ತು.

2005ರಲ್ಲಿ ಗುಜರಾತ್ ಪೊಲೀಸರು ಭೂಗತ ಜಗತ್ತಿನ ಸಂಪರ್ಕ ಹೊಂದಿದ್ದ ಸೊಹ್ರಾಬುದ್ದೀನ್‌ ಶೇಕ್‌ನನ್ನು ನಕಲಿ ಎನ್‌ಕೌಂಟರ್ ಮೂಲಕ ಹತ್ಯೆ ಮಾಡಿರುವ ಪ್ರಕರಣ ಸಾಕಷ್ಟು ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು.
ಸಂಬಂಧಿತ ಮಾಹಿತಿ ಹುಡುಕಿ