ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಕೇಂದ್ರದಿಂದ ಗುಜರಾತ್‌ನಲ್ಲಿ ಸಿಬಿಐ ದುರ್ಬಳಕೆ: ಬಿಜೆಪಿ (BJP | CBI | disproportionate assets | Parliament)
Bookmark and Share Feedback Print
 
ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರವು ಗುಜರಾತ್‌ನ ಸೊಹ್ರಾಬುದ್ದೀನ್ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಮತ್ತು ಇತರ ಕೆಲವು ರಾಜಕಾರಣಿಗಳ ವಿರುದ್ಧ ಸಿಬಿಐಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿದ್ದು, ಇದರ ವಿರುದ್ಧ ಸಂಸತ್ ಭವನದ ಹೊರಗಡೆ ಇಂದು ಪ್ರತಿಭಟನೆ ನಡೆಸಲಿದೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ 'ವೆಬ್‌ದುನಿಯಾ'ವನ್ನು ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಐಪಿಎಲ್ ಹಗರಣ, ದೂರವಾಣಿ ಕದ್ದಾಲಿಕೆ ಹಗರಣ ಮತ್ತು ಯುಪಿಎ ಸರಕಾರದಿಂದ ಸಿಬಿಐಯ ದುರ್ಬಳಕೆ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುವ ನಿರ್ಧಾರವನ್ನು ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

ಐಪಿಎಲ್ ಮತ್ತು ದೂರವಾಣಿ ಕದ್ದಾಲಿಕೆ ಹಗರಣದಲ್ಲಿ ನಾವು ಜಂಟಿ ಸಂಸದೀಯ ಸಮಿತಿ ತನಿಖೆಗೆ ಆಗ್ರಹಿಸಿದ್ದೆವು. ಸಿಬಿಐ ದುರ್ಬಳಕೆ ಬಗ್ಗೆ ಕೂಡ ತನಿಖೆ ನಡೆಯಬೇಕಿದೆ ಎಂದು ಅಡ್ವಾಣಿಯವರ ಹೇಳಿಕೆಯನ್ನು ಉಲ್ಲೇಖಿಸುತ್ತಾ ರಾಜ್ಯಸಭೆಯ ಉಪ ನಾಯಕ ಎಸ್.ಎಸ್. ಅಹ್ಲುವಾಲಿಯಾ ತಿಳಿಸಿದ್ದಾರೆ.

ಸರಕಾರ ಸಿಬಿಐಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಅವರು, ಗುರುವಾರ ಸಂಸತ್ತಿನ ಮಹಾತ್ಮ ಗಾಂಧಿ ಪ್ರತಿಮೆಯ ಎದುರು ಬಿಜೆಪಿಯ ಎಲ್ಲಾ ಸಂಸದರು ಧರಣಿ ನಡೆಸಲಿದ್ದಾರೆ ಎಂದರು.

ಕೇಂದ್ರ ಸರಕಾರವು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್, ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಮತ್ತು ಬಿಎಸ್‌ಪಿ ನಾಯಕಿ ಮಾಯಾವತಿ ವಿರುದ್ಧದ ಪ್ರಕರಣಗಳನ್ನು ಒಮ್ಮೆ ತೀವ್ರತೆಗೆ ಕೊಂಡೊಯ್ಯುವುದು, ಮತ್ತೊಮ್ಮೆ ಮೃದು ನೀತಿ ಅನುಸರಿಸುವ ಮೂಲಕ ಸಿಬಿಐಯನ್ನು ಬಳಸಿಕೊಂಡಿದೆ ಎಂದು ಆರೋಪಿಸಿದೆ.

ಇತ್ತೀಚೆಗೆ ಬಿಜೆಪಿ ಮತ್ತು ಎಡಪಕ್ಷಗಳು ಖಂಡನಾ ನಿರ್ಣಯ ಮಂಡಿಸಿದ ಸಂದರ್ಭದಲ್ಲಿ ಈ ಮೂರೂ ಪಕ್ಷಗಳು ಯುಪಿಎ ಸರಕಾರದ ಪರ ಮತ ಚಲಾಯಿಸಿರುವುದನ್ನು ಸ್ಮರಿಸಿಕೊಳ್ಳಬಹುದಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ