ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ತಿರುಪತಿ ಬಳಿ ಭಾರೀ ಅಫಘಾತ: 12 ಮಂದಿ ದುರ್ಮರಣ (Tirupati | head-on collision)
Bookmark and Share Feedback Print
 
ಇಲ್ಲಿಗೆ ಸಮೀಪದ ಅಗರಾಲಾ ಹಳ್ಳಿಯ ಬಳಿ ಆಂಧ್ರಪ್ರದೇಶ ಸಾರಿಗೆ ಸಂಸ್ಥೆಯ ಬಸ್ ಹಾಗೂ ವ್ಯಾನ್ ಮುಖಾಮುಖಿ ಢಿಕ್ಕಿಯಲ್ಲಿ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

ತಿರುಪತಿಗೆ ತೆರಳುತ್ತಿದ್ದ ವ್ಯಾನ್‌ನಲ್ಲಿ 14 ಮಂದಿ ಪ್ರಯಾಣಿಸುತ್ತಿದ್ದು, ಇಲ್ಲಿಗೆ ಸಮೀಪ ನೆಲ್ಲೂರು ಬಳಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ರಾಜ್ಯ ಸಾರಿಗೆ ಬಸ್‌ಗೆ ಢಿಕ್ಕಿ ಹೊಡೆದಿದೆ. ಈ ಪರಿಣಾಮ 12 ಮಂದಿ ಸಾವನ್ನಪ್ಪಿದ್ದು, ಇಬ್ಬರು ತೀವ್ರ ಗಾಯಗೊಂಡಿದ್ದಾರೆ.

ಈ ಪೈಕಿ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬ ವ್ಯಕ್ತಿ ಇಲ್ಲಿಗೆ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಳಿದ ಇಬ್ಬರು ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ತಿರುಪತಿ, ಅಫಘಾತ, ದುರ್ಮರಣ