ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆಯನ್ನು ಭಗ್ನಗೊಳಿಸಿರುವ ಘಟನೆ ಇಲ್ಲಿನ ಚಂದ್ರಾಪುರ ಜಿಲ್ಲೆಯ ಚಿಖಾಲಿ ಹಳ್ಳಿಯಲ್ಲಿ ಬುಧವಾರ ನಡೆದಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿತ್ತು. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಪಹರೆಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.