ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮಡಿದವರಿಗೆ ಸಂತಾಪ; 2 ಲಕ್ಷ ರೂ.ಪರಿಹಾರ: ಪ್ರಧಾನಿ (Manmohan Singh | Air India Express | Sonia Gandhi | flight crash)
Bookmark and Share Feedback Print
 
ದುಬೈನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ಏಕ್ಸ್‌ಪ್ರೆಸ್ ವಿಮಾನ ದುರಂತದಲ್ಲಿ ಮಡಿದವರಿಗೆ ಪ್ರಧಾನಿ ಮನಮೋಹನ್ ಸಿಂಗ್ ಸಂತಾಪ ಸೂಚಿಸಿದ್ದು, ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಶನಿವಾರ ಘೋಷಿಸಿದ್ದಾರೆ.

ದುಬೈಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ, ಮಂಗಳೂರಿನ ಕೆಂಜಾರು ಬಳಿಯಿರುವ ಬಜ್ಪೆ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿರುವಾಗ ನಿಯಂತ್ರಣ ತಪ್ಪಿದ್ದರಿಂದ ಅಪಘಾತಕ್ಕೀಡಾಗಿ 158 ಪ್ರಯಾಣಿಕರು ಸಾವನ್ನಪ್ಪಿ, ಎಂಟು ಪ್ರಯಾಣಿಕರು ಬದುಕುಳಿದಿದ್ದರು.

ವಿಮಾನ ದುರಂತದಲ್ಲಿ ಮಡಿದವರಿಗೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಕೂಡ ಸಂತಾಪ ವ್ಯಕ್ತಪಡಿಸಿದ್ದು, ಇದೊಂದು ದೊಡ್ಡ ದುರಂತ, ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ದುಃಖ ತಡೆದುಕೊಳ್ಳುವ ಶಕ್ತಿ ಭಗವಂತ ನೀಡಲಿ ಎಂದು ತಿಳಿಸಿದ್ದಾರೆ.

ಅಲ್ಲದೇ ಘಟನೆಯಲ್ಲಿ ಮಡಿದವರ ಗೌರವಾರ್ಥವಾಗಿ 2ನೇ ಬಾರಿ ಅಧಿಕಾರದ ಗದ್ದುಗೆ ಏರಿದ ಯುಪಿಎ ಸರ್ಕಾರದ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿವಾಸದಲ್ಲಿ ಶನಿವಾರ ಸಂಜೆ ಹಮ್ಮಿಕೊಂಡಿದ್ದ ಸಮಾರಂಭವನ್ನು ರದ್ದುಪಡಿಸಲಾಗಿದೆ ಎಂದು ಪ್ರಧಾನಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ವಿಮಾನ ದುರಂತದಲ್ಲಿ ಗಾಯಗೊಂಡವರಿಗೂ ಕೂಡ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿಯೂ ಸಿಂಗ್ ಘೋಷಿಸಿದ್ದಾರೆ.

ಮಂಗಳೂರಿನಲ್ಲಿ ವಿಮಾನ ದುರಂತ ನಡೆದ ಸುದ್ದಿ ತಿಳಿಯುತ್ತಿದ್ದಂತೆಯೇ ಪ್ರಧಾನಿ ಸಿಂಗ್ ಅವರು ಗೃಹ ಸಚಿವ ಪಿ.ಚಿದಂಬರಂ ಮತ್ತು ಕೇಂದ್ರ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಘಟನಾ ಸ್ಥಳದಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯ ಹಾಗೂ ವಸ್ತುಸ್ಥಿತಿಯ ಬಗ್ಗೆ ವಿವರಣೆ ಪಡೆದಿರುವುದಾಗಿ ಪಿಎಂಓ ಕಚೇರಿ ಹೇಳಿದೆ.
ಸಂಬಂಧಿತ ಮಾಹಿತಿ ಹುಡುಕಿ