ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಪ್ರಜೆಗಳ ಅಭಿವೃದ್ಧಿಗೆ ಕೇಂದ್ರ ಮೂಕಪ್ರೇಕ್ಷಕವಾಗಿಲ್ಲ: ಪ್ರಧಾನಿ (Manmohan Singh | UPA-II | inflation | Naxal | Congress)
Bookmark and Share Feedback Print
 
ಜಾಗತಿಕ ಆರ್ಥಿಕ ಹೊಡೆತದ ನಡುವೆಯೂ ಭಾರತ ಆರ್ಥಿಕ ಹಿಂಜರಿತ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದೆ. ಅಲ್ಲದೇ ಪ್ರಸಕ್ತ ಸಾಲಿನ ವರ್ಷಾಂತ್ಯದೊಳಗೆ ಹಣದುಬ್ಬರವನ್ನು ಶೇ.5-6ರಷ್ಟು ತಲುಪುವ ವಿಶ್ವಾಸ ಹೊಂದಿರುವುದಾಗಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ತಿಳಿಸಿದ್ದು, ಕೇಂದ್ರ ಸರ್ಕಾರ ಯಾವುದೇ ಸಮಸ್ಯೆಗಳ ಬಗ್ಗೆಯೂ ಮೂಕಪ್ರೇಕ್ಷವಾಗಿಲ್ಲ, ದೇಶದ ಅಭಿವೃದ್ಧಿ ದೃಷ್ಟಿಯಿಂದ ಹೆಜ್ಜೆ ಇಡುತ್ತಿರುವುದಾಗಿ ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಅವರು ನವದೆಹಲಿಯಲ್ಲಿ ಭಾನುವಾರ 2ನೇ ಅವಧಿಯ ಯುಪಿಎ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕರೆದ ರಾಷ್ಟ್ರೀಯ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಸರ್ಕಾರದ ಸಾಧನೆಗಳ ಕುರಿತು ವಿವರಣೆ ನೀಡಿದರು.

ಬೆಲೆ ಏರಿಕೆ ಸಮರ್ಥವಾಗಿ ಎದುರಿಸಿದ್ದೇವೆ: ಎಲ್ಲ ಸಮಸ್ಯೆಗಳ ನಡುವೆಯೂ ಭಾರತ ಆರ್ಥಿಕ ಹಿಂಜರಿತವನ್ನು ಸಮರ್ಥವಾಗಿ ಎದುರಿಸಿದೆ. ಆ ನಿಟ್ಟಿನಲ್ಲಿ ಶೇ.10ರಷ್ಟು ಆರ್ಥಿಕ ಬೆಳವಣಿಗೆ ಸಾಧಿಸುವ ಗುರಿ ಹೊಂದಿರುವುದಾಗಿ ಈ ಸಂದರ್ಭದಲ್ಲಿ ಹೇಳಿದರು. ಹಣದುಬ್ಬರಕ್ಕೆ ನೆರೆ ಹಾವಳಿಯೂ ಪ್ರಮುಖ ಕಾರಣವಾಗಿದೆ. ಅಲ್ಲದೇ ಬೆಲೆ ಏರಿಕೆಯನ್ನು ಸಮರ್ಥವಾಗಿ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ನಕ್ಸಲ್ ಸಮಸ್ಯೆ ದೊಡ್ಡ ಸವಾಲು: ದೇಶದ ಆಂತರಿಕ ಭದ್ರತೆಗೆ ನಕ್ಸಲೀಯರು ದೊಡ್ಡ ಸವಾಲಾಗಿದ್ದಾರೆ. ಆದರೆ ನಕ್ಸಲ್ ಸಮಸ್ಯೆಯನ್ನು ಯುಪಿಎ ಸರ್ಕಾರ ಲಘುವಾಗಿ ಪರಿಗಣಿಸಿಲ್ಲ. ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಅವರು, ನಕ್ಸಲ್ ಹಾಗೂ ಉಗ್ರರ ಹಾವಳಿಯಿಂದಾಗಿ ದೇಶದ ಆರ್ಥಿಕ ಪ್ರಗತಿಗೆ ಅಡ್ಡಿ ಉಂಟಾಗಿದೆ ಎಂದರು.

ಪಾಕ್ ಜತೆ ಮತ್ತಷ್ಟು ಸಂಬಂಧ ವೃದ್ಧಿ: ರಾಷ್ಟ್ರೀಯ ಭದ್ರತಾ ವ್ಯವಸ್ಥೆಯಲ್ಲಿ ಬದಲಾವಣೆಯೂ ಆಗಬೇಕಿದೆ, ನೆರೆ ರಾಷ್ಟ್ರಗಳೊಂದಿಗೆ ಸಂಬಂಧ ವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದು ನಮ್ಮ ಮುಖ್ಯ ಗುರಿಯಾಗಿದೆ. ಪಾಕಿಸ್ತಾನ ಜತೆಗಿನ ಎಲ್ಲಾ ವಿವಾದಗಳ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎಂದ ಸಿಂಗ್, ಮಾನವ ಹಕ್ಕುಗಳ ಉಲ್ಲಂಘನೆಯನ್ನು ಯಾವುದೇ ಕಾರಣಕ್ಕೂ ಸಹಿಸಲ್ಲ ಎಂದು ಹೇಳಿದರು.

ಸಿಬಿಐ ದುರ್ಬಳಕೆಯಾಗಿಲ್ಲ: ಕೇಂದ್ರ ಸರ್ಕಾರದಿಂದ ಸಿಬಿಐ ದುರ್ಬಳಕೆಯಾಗಿದೆಯಲ್ಲ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕೇಂದ್ರದಿಂದ ಸಿಬಿಐ ದುರ್ಬಳಕೆಯಾಗಿಲ್ಲ ಎಂದು ಸ್ಪಷ್ಟನೆ ನೀಡಿದ ಪ್ರಧಾನಿ, ಸಿಬಿಐ ಸ್ವತಂತ್ರ ಸಂಸ್ಥೆಯಾಗಿದೆ. ಅದರಲ್ಲಿ ಸರ್ಕಾರ ಹಸ್ತಕ್ಷೇಪ ನಡೆಸುತ್ತಿಲ್ಲ ಎನ್ನುವ ಮೂಲಕ ಪ್ರತಿಪಕ್ಷಗಳ ಆರೋಪವನ್ನು ನಿರಾಕರಿಸಿದರು.
ಸಂಬಂಧಿತ ಮಾಹಿತಿ ಹುಡುಕಿ