ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮುನ್ಸಿಪಲ್ ಚುನಾವಣೆ: ಎಡಪಕ್ಷಕ್ಕೆ ಮುಖಭಂಗ-ತೃಣಮೂಲ ಜಯಭೇರಿ (Kolkata Municipal Corporation | Trinamool Congress | Left Front | Mamata)
Bookmark and Share Feedback Print
 
PTI
ಕೋಲ್ಕತಾ ಮುನ್ಸಿಪಲ್ ಕಾರ್ಪೋರೇಷನ್‌ ಚುನಾವಣೆ ಜಿದ್ದಾಜಿದ್ದಿನ ಹಣಾಹಣಿಯಲ್ಲಿ ಕೊನೆಗೂ ಆಡಳಿತಾರೂಢ ಎಡಪಕ್ಷಗಳಿಗೆ ತೀವ್ರ ಮುಖಭಂಗ ಅನುಭವಿಸಿದ್ದು, ಬದ್ಧಶತ್ರು ಎಂದೇ ಬಿಂಬಿತವಾಗಿರುವ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಭರ್ಜರಿ ಜಯಗಳಿಸುವ ಮೂಲಕ ತಮ್ಮ ಪಾರುಪಥ್ಯ ಸ್ಥಾಪಿಸಿದ್ದಾರೆ.

ಕೋಲ್ಕತಾ ಮುನ್ಸಿಪಲ್ ಕಾರ್ಪೋರೇಷನ್‌ನ 141ವಾರ್ಡ್‌ಗಳಿಗೆ ಭಾನುವಾರ ಚುನಾವಣೆ ನಡೆದಿತ್ತು. ಇದೀಗ ತೃಣಮೂಲ ಕಾಂಗ್ರೆಸ್ 98ಸ್ಥಾನಗಳನ್ನು ತನ್ನ ಬಗಲಿಗೆ ಹಾಕಿಕೊಂಡಿದ್ದರೆ, ಆಡಳಿತಾರೂಢ ಎಡಪಕ್ಷ ಕೇವಲ 31 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಅಲ್ಲದೇ ಬ್ಯಾನರ್ಜಿಯ ತೃಣಮೂಲ ಕಾಂಗ್ರೆಸ್ ಶ್ರೀಮಂತ ಸೆಟಲೈಟ್ ಟೌನ್‌ಶಿಫ್ ಆಗಿರುವ ಬಿಧಾನ್ ನಗರದ 25 ಸ್ಥಾನಗಳಲ್ಲಿ 18ರಲ್ಲಿ ಜಯಭೇರಿ ಗಳಿಸಿದೆ. ಎಡಪಕ್ಷ ಕೇವಲ 7 ಸ್ಥಾನದಲ್ಲಿ ಗೆಲುವು ಸಾಧಿಸಿದೆ.

ಜಿಲ್ಲೆಯಲ್ಲಿ ತೃಣಮೂಲ ಕಾಂಗ್ರೆಸ್ 26ಮುನ್ಸಿಪಾಲ್ಟಿ‌ ತನ್ನ ಬಗಲಿಗೆ ಹಾಕಿಕೊಂಡಿದ್ದು, ಎಡಪಕ್ಷ 11 ಮತ್ತು ಕಾಂಗ್ರೆಸ್ ಕೇವಲ ಆರು ಸ್ಥಾನಗಳಷ್ಟೇ ಗೆದ್ದಿದೆ.

ಚುನಾವಣಾ ಫಲಿತಾಂಶ ಘೋಷಣೆಯಾಗುತ್ತಿದ್ದಂತೆಯೇ ತೃಣಮೂಲ ಕಾಂಗ್ರೆಸ್‌ನ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮ ವ್ಯಕ್ತಪಡಿಸಿದರು. ಬೀದಿ, ಬೀದಿಗಳಲ್ಲಿ ಮೆರವಣಿಗೆ ನಡೆಸಿ, ಪಕ್ಷದ ವರಿಷ್ಠೆ ಮಮತಾ ಬ್ಯಾನರ್ಜಿ ಪರ ಘೋಷಣೆ ಕೂಗಿದರು.

ಮುಂದಿನ ಅಸೆಂಬ್ಲಿ ಚುನಾವಣೆಗೆ ದಿಕ್ಸೂಚಿ?: ಈ ಬಾರಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆ ಆಡಳಿತಾರೂಢ ಎಡಪಕ್ಷ ಮತ್ತು ತೃಣಮೂಲ ಕಾಂಗ್ರೆಸ್‌ಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದವು. ಅಲ್ಲದೇ ಮುಂದಿನ ವರ್ಷ ನಡೆಯಲಿರುವ ಅಸೆಂಬ್ಲಿ ಚುನಾವಣೆಗೂ ಇದು ದಿಕ್ಸೂಚಿಯಾಗಿದ್ದರಿಂದ ಜಿದ್ದಾಜಿದ್ದಿನ ಹೋರಾಟ ನಡೆದಿತ್ತು. ಆದರೆ ಇದೀಗ ಕೋಲ್ಕತಾದ ಮತದಾರ ಎಡಪಕ್ಷದಿಂದ ತೃಣಮೂಲದತ್ತ ವಾಲಿರುವುದು ಸ್ಪಷ್ಟವಾಗಿದೆ. ಇದು ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಪುನರಾವರ್ತನೆಯಾಗುವ ಸಾಧ್ಯತೆ ನಿಚ್ಚಳವಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ