ಕುಡಿದ ಮತ್ತಿನಲ್ಲಿ ಸ್ವತಃ ತಂದೆಯೊಬ್ಬ ತನ್ನ ಅಪ್ರಾಪ್ತ ವಯಸ್ಸಿನ ಐದು ಮಕ್ಕಳನ್ನು ಅಮಾನವೀಯವಾಗಿ ಹತ್ಯೆಗೈದಿರುವ ಘಟನೆ ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿರುವುದಾಗಿ ಶನಿವಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಭೋಪಾಲ್‌ನಿಂದ 39 ಕಿಲೋ ಮೀಟರ್ ದೂರದಲ್ಲಿರುವ ಕಾನೋರಿಯಾ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಪಾನಮತ್ತನಾಗಿ ಮನೆಗೆ ಬಂದ ವ್ಯಕ್ತಿ 2ರಿಂದ6 ವರ್ಷದ ಐದು ಹೆಣ್ಣುಮಕ್ಕಳನ್ನು ಹರಿತ ಆಯುಧದಿಂದ ಕೊಂದಿರುವುದಾಗಿ ಪೊಲೀಸರು ಹೇಳಿದ್ದಾರೆ.
ಪಾನಮತ್ತ ತಂದೆ ಯಾವ ಕಾರಣಕ್ಕಾಗಿ ಮಕ್ಕಳನ್ನು ಕೊಂದ, ಆ ಸಂದರ್ಭದಲ್ಲಿ ಮನೆಯಲ್ಲಿ ಬೇರಾರೂ ಇದ್ದರೆ ಎಂಬ ಬಗ್ಗೆ ಪೊಲೀಸರು ಯಾವುದೇ ಮಾಹಿತಿ ನೀಡಿಲ್ಲ. ಆದರೆ ಮಕ್ಕಳನ್ನು ಕೊಂದ ತಂದೆಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.