ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಪ.ಬಂಗಾಳ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪ್ರಣಬ್ ರಾಜೀನಾಮೆ (Sonia Gandhi|Congress|Pranab Mukherjee|Manas Ranjan Bhunia|Bengal Congress)
Bookmark and Share Feedback Print
 
PTI
ಹಿರಿಯ ಕಾಂಗ್ರೆಸಿಗ, ಕೇಂದ್ರ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಭಾನುವಾರ ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕೇಂದ್ರ ಸಚಿವ ಹುದ್ದೆಯೊಂದಿಗೆ ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಈವರೆಗೆ ಜವಾಬ್ದಾರಿ ನಿರ್ವಹಿಸುತ್ತಿದ್ದ ಪ್ರಣಬ್, ತನಗೆ ಇತ್ತೀಚೆಗೆ ಅತಿ ಹೆಚ್ಚಿನ ರಾಜಕೀಯ ಜವಾಬ್ದಾರಿಗಳಿರುವ ಕಾರಣ ತನಗೆ ಈ ಅಧ್ಯಕ್ಷ ಹುದ್ದೆಯನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ತಮ್ಮ ರಾಜೀನಾಮೆಗೆ ಕಾರಣವನ್ನು ತಿಳಿಸಿದ್ದಾರೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ಜನಾರ್ಧನ ದ್ವಿವೇದಿ ಈ ಕುರಿತು ಮಾತನಾಡಿ, ಈಗಾಗಲೇ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ಪ್ರಣಬ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದು, ಆ ಸ್ಥಾನಕ್ಕೆ ಮಾನಸ್ ರಂಜನ್ ಭೂನಿಯಾ ಅವರನ್ನು ಪಶ್ಚಿಮ ಬಂಗಾಳದ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ